ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 3ನೇ ದಿನದ ಅತಿರುದ್ರ ಮಹಾಯಾಗದ ಮುನ್ನೋಟ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ‘ಅತಿರುದ್ರ ಮಹಾಯಾಗ’ ಅನೇಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಎರಡು ದಿನಗಳನ್ನು ಪೂರೈಸಿದೆ.


ಅತಿರುದ್ರ ಮಹಾಯಾಗದ ಮೂರನೇ ದಿನವಾದ ಫೆಬ್ರವರಿ 24, 2023 ರ ಶುಕ್ರವಾರದಂದು ಮುಂಜಾನೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ಸಾಯಂಕಾಲ ಶ್ರೀ ರುದ್ರಕ್ರಮಪಾಠ, ಮಹಾಪೂಜೆ, ಅಷ್ಟಾವಧಾನ, ಗಣಯಾಗಮಂಟಪದಲ್ಲಿ ವಾಸ್ತು ಹೋಮ, ರಾಕ್ಷೋಘ್ನ ಹೋಮ, ಪ್ರಾಸಾದ ಶುದ್ಧಿ, ಯಾಗಕುಂಡ ಸಂಸ್ಕಾರ ಹೋಮ ನೆರವೇರಲಿದೆ. ಇದರೊಂದಿಗೆ ಸಾಯಂಕಾಲ 5 ರಿಂದ ಧಾರ್ಮಿಕ ಸಭಾ ಕಾರ್ಯಕ್ರಮದಿಂದ ಮೊದಲ್ಗೊಂಡು, ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ ನ ಸದಸ್ಯರಾದ ಕಶೆಕೋಡಿಯ ಶ್ರೀ ಸೂರ್ಯನಾರಾಯಣ ಭಟ್ ಅವರಿಂದ ಧಾರ್ಮಿಕ ಉಪನ್ಯಾಸ ಮತ್ತು ಆರ್ಯಭಟ ಪ್ರಶಸ್ತಿ ಪುರಸ್ಕೃತ ಜಗದೀಶ್ ಆಚಾರ್ಯ ಪುತ್ತೂರು ಮತ್ತು ಬಳಗದವರ ತುಳುನಾಡ ಗಾನ ಗಂಧರ್ವ ತಂಡದಿಂದ “ಶಿವ ಗಾನಾಮೃತ” ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಶೃಂಗೇರಿ ಶಾರದಾ ಪೀಠಾಧೀಶ್ವರ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳ ಆಶೀರ್ವಾದ ಹಾಗೂ ನೇತೃತ್ವದೊಂದಿಗೆ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ಅತಿರುದ್ರ ಮಹಾಯಾಗ ಮಾರ್ಚ್ 05, 2023 ರವರೆಗೆ ನಡೆಯಲಿದೆ. 121 ಋತ್ವಿಜರ ನೇತೃತ್ವದಲ್ಲಿ 11 ಕುಂಡಗಳಲ್ಲಿ ನಿರಂತರವಾಗಿ ಯಾಗ ನಡೆಯಲಿವೆ.