ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅತಿರುದ್ರ ಮಹಾಯಾಗ ಯಜ್ಞ ದ್ರವ್ಯಗಳ ಸಮರ್ಪಣಾ ಕಾರ್ಯಕ್ರಮಕ್ಕೆ ಚಾಲನೆ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಅತಿರುದ್ರ ಮಹಾಯಾಗದ ಅಂಗವಾಗಿ ಭಾನುವಾರದಂದು ಯಜ್ಞಕ್ಕೆ ಬೇಕಾಗುವ ದ್ರವ್ಯಗಳ ಸಮರ್ಪಣಾ ಕಾರ್ಯಕ್ರಮದಲ್ಲಿ ಅತಿಥಿಗಳೆಲ್ಲರೂ ಸೇರಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಕೊಪ್ಪರಿಗೆಗೆ ಭತ್ತ ಸುರಿಯುವ ಮೂಲಕ ಚಾಲನೆ ನೀಡಿದರು.
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಕೆರಾಡಿ ಚಂದ್ರಶೇಖರ್ ಶೆಟ್ಟಿ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉಡುಪಿಯ ಶಾಸಕರು, ಅತಿರುದ್ರ ಮಹಾಯಾಗ ಸಮಿತಿಯ ಅಧ್ಯಕ್ಷರು ಕೆ. ರಘುಪತಿ ಭಟ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಅತಿರುದ್ರ ಮಹಾಯಾಗ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕುಕ್ಕೆಹಳ್ಳಿ ಅವರು ಸ್ವಾಗತಿಸಿದರು. ಶಾಶ್ವತ ಟ್ರಸ್ಟಿ ದಿನೇಶ್ ಸಾಮಂತ್ ಪ್ರಸ್ತಾವನೆಗೈದರು. ದೇವಸ್ಥಾನದ ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷರಾದ ಮಹೇಶ್ ಠಾಕೂರ್ ಯಾಗದ ತಯಾರಿಯಲ್ಲಿ ಸಹಕರಿಸಿದವರನ್ನು ಅಭಿನಂದಿಸಿದರು.
ಮುಖ್ಯ ಅತಿಥಿಗಳಾಗಿ ಬರೋಡ ತುಳುಕೂಟದ ಅಧ್ಯಕ್ಷರು ಶಶಿಧರ್ ಶೆಟ್ಟಿ, ಮಣಿಪಾಲ್ ಸ್ಟೋರ್ಸ್ ಮಾಲಕರಾದ ಆತ್ಮಾರಾಮ ನಾಯಕ್, ಶ್ರೀ ಮಹೇಶ ಮರ್ದಿನಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಡಾ|ರವಿರಾಜ ಆಚಾರ್ಯ, ಉದ್ಯಮಿಗಳಾದ ಶ್ರೀ ಉದಯ ಕುಮಾರ್ ಶೆಟ್ಟಿ, ಬೆಳ್ವೆ ಗಣೇಶ್ ಕಿಣಿ, ಯು ಸತೀಶ್ ಶೇಟ್, ರವಿಕುಮಾರ್ ಉಪಸ್ಥಿತರಿದ್ದರು.

ಸಮಿತಿ ಕಾರ್ಯದರ್ಶಿಗಳಾದ ಡಾ| ಬಾಲಕೃಷ್ಣ ಮದ್ದೋಡಿ, ರತ್ನಾಕರ್ ಇಂದ್ರಾಳಿ, ಗೋಪಾಲಕೃಷ್ಣ ಪ್ರಭು ಉಪಸ್ಥಿತರಿದ್ದರು. ಸುಚೇತಾ ನಾಯಕ್ ನಿರೂಪಿಸಿದರು.
ಅತಿರುದ್ರ ಮಹಾಯಾಗದ ಪ್ರಯುಕ್ತ ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 12, 2023 ರಂದು ನಡೆದ ‘ಸಮರ್ಪಣ ದಿವಸ’ದ ಅಂಗವಾಗಿ ನಡೆದ ಬಾಲಶಿವ ವೇಷಭೂಷಣ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ 150ಕ್ಕೂ ಹೆಚ್ಚಿನ ಪುಟಾಣಿ ಬಾಲಶಿವ ವೇಷಭೂಷಣಧಾರಿಗಳು ಭಾಗವಹಿಸಿದ್ದರು. ಶಿವ ದೇವಸ್ಥಾನದ ಪ್ರಾಂಗಣವು ಬಾಲಶಿವರುಗಳಿಂದ ತುಂಬಿ ತುಳುಕಿ ಭಕ್ತ ಸಮೂಹ ಪುಳಕಿತಗೊಂಡಿತು.
