ಪ್ರೊ.ಎನ್.ಟಿ ಭಟ್, ಪ್ರೊ.ಬರಗೂರು, ನಾಗತಿಹಳ್ಳಿಗೆ ಶಿವರಾಮ ಕಾರಂತ ಪ್ರಶಸ್ತಿ

ಮೂಡುಬಿದಿರೆ: ಇಲ್ಲಿನ ಶಿವರಾಮ ಕಾರಂತ ಪ್ರತಿಷ್ಠಾನ ನೀಡುವ ಪ್ರಸಕ್ತ ವರ್ಷದ ಶಿವರಾಮ ಕಾರಂತ ಪ್ರಶಸ್ತಿಗೆ ಸಾಹಿತಿಗಳಾದ ಪ್ರೊ.ಎನ್.ಟಿ ಭಟ್, ಪ್ರೊ.ಬರಗೂರು ರಾಮಚಂದ್ರಪ್ಪ ಹಾಗೂ ಸಿನಿಮಾ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ ಆಯ್ಕೆಯಾಗಿದ್ದಾರೆ ಎಂದು ಪ್ರತಿಷ್ಠಾನದ ಅಧ್ಯಕ್ಷೆ ಜಯಶ್ರೀ ಅಮರನಾಥ್ ಶೆಟ್ಟಿ ಮತ್ತು ಪ್ರಧಾನ ಕಾರ್ಯದರ್ಶಿ ಡಾ.ಜಯಪ್ರಕಾಶ ಮಾವಿನಕುಳಿ ತಿಳಿಸಿದ್ದಾರೆ.