ದಾನಿ ಅಶೋಕ್ ಶೆಟ್ಟಿ ಬೆಳ್ಳಾಡಿಯವರಿಂದ ‘ಶ್ರೀದೇವಿ ನಿಲಯ’ ಕೀಲಿ ಕೈ ಹಸ್ತಾಂತರ
ಹನುಮಗಿರಿಮೇಳ ದ ಕಲಾವಿದ ರೂಪೇಶ್ ಆಚಾರ್ಯ ಇವರಿಗೆ ಪಟ್ಲ ಯಕ್ಷಾಶ್ರಯ ಯೋಜನೆಯಡಿಯಲ್ಲಿ ವಿಟ್ಲ ಕೇಪು ಶ್ರೀ ಉಳ್ಳಾಲ್ತಿ ದುರ್ಗಾಪರಮೇಶ್ವರೀ ದೇವಸ್ಥಾನದ ಹತ್ತಿರದಲ್ಲಿ ನಿರ್ಮಾಣಗೊಂ ಡಿರುವ “ಶ್ರೀದೇವಿನಿಲಯ”ನೂತನ ಮನೆಯ ಕೀಲಿಕೈ ಹಸ್ತಾಂತರವು ಕಾರ್ಯಕ್ರಮ ನಡೆಯಿತು.
ಯಕ್ಷಧ್ರುವ ಪಟ್ಲ ಸತೀಶ ಶೆಟ್ಟಿಯವರು ಹಾಗೂ ನೂತನ ಮನೆಯ ನಿರ್ಮಾಣಕ್ಕೆ ಕಾರಣೀಕರ್ತರಾದ ದಾನಿ ಅಶೋಕ್ ಶೆಟ್ಟಿ ಬೆಳ್ಳಾಡಿಯವರು ಭಾಗವಹಿಸಿ ಶುಭಹಾರೈಸಿದರು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ ವಿಟ್ಲ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಪೂವಪ್ಪ ಶೆಟ್ಟಿ ಅಳಿಕೆ ಹಾಗೂ ಪದಾಧಿಕಾರಿಗಳಾದ ಅರವಿಂದ ರೈ ಮೂರ್ಜೆಬೆಟ್ಟು ಹಾಗೂ ಡಾ. ಪ್ರಖ್ಯಾತ್ ಶೆಟ್ಟಿ ಅಳಿಕೆ ಉಪಸ್ಥಿತರಿದ್ದರು.
ಮನೆಯವರ ವತಿಯಿಂದ ನಿರ್ಮಾತೃ ಅಶೋಕ್ ಶೆಟ್ಟಿ ಬೆಳ್ಳಾಡಿಯವರಿಗೆ ಹಾಗೂ ವಿಟ್ಲ ಘಟಕದ ಪದಾಧಿಕಾರಿಗಳಿಗೆ ಶಾಲು ಹೊದಿಸಿ ಗೌರವ ಸಮರ್ಪಿಸಿದರು.ನಂತರ ಯಕ್ಷಧ್ರುವ ಪಟ್ಲ ಫೌಂಡೇಶನ್ ಕೇಂದ್ರೀಯ ಘಟಕದ ವತಿಯಿಂದ ರೂಪೇಶ್ ಆಚಾರ್ಯ ಅವರ ಮನೆಯವರನ್ನು ಗೌರವಿಸಲಾಯಿತು.