ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯ, ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ ಸೇರಿದಂತೆ ಗಣ್ಯರಿಂದ ಸಂತಾಪ
ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಸಿಎಂ ಬಸವರಾಜ್ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಇಂದು ಸಂಜೆ 5 ಗಂಟೆಗೆ ಸಿದ್ದೇಶ್ವರ ಸ್ವಾಮೀಜಿ ಅಂತ್ಯಕ್ರಿಯೆ ನಡೆಯಲಿದೆ.ಜ್ಞಾನಯೋಗಾಶ್ರಮದ ಆವರಣದಲ್ಲಿ ಸ್ವಾಮೀಜಿಗಳ ಅಂತ್ಯಸಂಸ್ಕಾರ ನಡೆಯಲಿದೆ.
ಸಕಲ ಸರ್ಕಾರಿ ಗೌರವದೊಂದಿಗೆ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದ್ದು, ಸ್ವಾಮೀಜಿ ಅಪೇಕ್ಷೆಯಂತೆಯೇ ಅಂತ್ಯಕ್ರಿಯೆ ನಡೆಯಲಿದೆ.ಸದ್ಯ ಸೈನಿಕ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಮುಂಜಾನೆಯಿಂದಲೇ ಸಾವಿರಾರು ಭಕ್ತರು ಆಗಮಿಸಿ ಅಂತಿಮ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.
ಗಣ್ಯರು, ಸಾರ್ವಜನಿಕರ ಅಂತಿಮ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಮಹಿಳೆಯರು, ಮಕ್ಕಳು ಸೇರಿದಂತೆ ಸಾಗರೋಪಾದಿಯಲ್ಲಿ ಬೆಳಂಬೆಳಗ್ಗೆ ಭಕ್ತರ ದಂಡು ಹರಿದು ಬರುತ್ತಿದೆ. ನಸುಕಿನ ಜಾವವೇ ಅಂತಿಮ ದರ್ಶನಕ್ಕೆ ಭಕ್ತಾದಿಗಳು ಹಾಕಿದ ಕಾರಿಡಾರ್ ಸಂಪೂರ್ಣ ಭರ್ತಿಯಾಗಿದೆ ಶ್ರೀಗಳ ಅಂತಿಮ ದರ್ಶನಕ್ಕೆ ಬರುವ ಭಕ್ತರಿಗೆ ಪ್ರಸಾದದ ವ್ಯವಸ್ಥೆ ಕೂಡ ಮಾಡಲಾಗಿದೆ. ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಸಿದ್ದರಾಮಯ್ಯ, ಕುಮಾರಸ್ವಾಮಿ ಸೇರಿದಂತೆ ರಾಜ್ಯ ನಾಯಕರು ಕಂಬನಿ ಮಿಡಿದಿದ್ದಾರೆ.