ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು

ಬೆಂಗಳೂರು;ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಫೈಲ್ಸ್ ಸಂಬಂದಿಸಿದ ಸಣ್ಣ ಶಸ್ತ್ರಚಿಕಿತ್ಸೆ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಗಳೂರಿನ ಹೆಚ್ ಎ ಎಲ್ ರಸ್ತೆಯಲ್ಲಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಗರದ ಹೆಚ್‌ಎಎಲ್ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು 11 ಗಂಟೆಗೆ ಸಿದ್ದರಾಮಯ್ಯ ಅವರಿಗೆ ಶಸ್ತ್ರಚಿಕಿತ್ಸೆ ನಡೆಯಲಿದೆ. ಆರೋಗ್ಯವಾಗಿದ್ದರೆ ಸಂಜೆಯೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ವರದಿಯಾಗಿದೆ. ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಒಂದೆಡೆ ಚುನಾವಣೆ ರಂಗು ಕಾವೇರಿದೆ.ಮಾಜಿ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ರಾಜಕೀಯದ ಕೇಂದ್ರ ಬಿಂದುವಾಗಿದ್ದು ಮುಂದಿನ ಸಿಎಂ ಎಂದೇ ಬಿಂಬಿತರಾಗಿದ್ದಾರೆ.
