ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ ಸಂಭ್ರಮದ ಉದ್ಘಾಟನೆ
ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿಹಬ್ಬ ಆಚರಣೆಯ ಸಂಭ್ರಮಕ್ಕೆ ಸುಳ್ಯ ಕೇರ್ಪಳದ ಭಂಟರ ಭವನದಲ್ಲಿ ಅದ್ದೂರಿಯಾಗಿ ಚಾಲನೆ ಸಿಕ್ಕಿತ್ತು.
ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.ಬಳಿಕ ಮಾತನಾಡಿ ಅವರು, ಸುಳ್ಯದ ಕಾರ್ಯನಿರತ ಪತ್ರಕರ್ತರ ಸಂಘ ಬೆಳ್ಳಿ ಹಬ್ಬದ ಸಂಭ್ರಮದಲ್ಲಿದೆ. ಈ ಕಾರ್ಯಕ್ರಮ ಯಶಸ್ವಿಯಾಗಲಿ. ಮುಂದಿನ ದಿನಗಳಲ್ಲಿ ಇನ್ನಷ್ಟು ಕಾರ್ಯಕ್ರಮಗಳು ಮೂಡಿ ಬರಲಿ ಎಂದರು.
ಆನಂತರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಅಧ್ಯಕ್ಷರಾದ ಶ್ರೀನಿವಾಸ್ ನಾಯಕ್ ಇಂದಾಜೆ ಅವರು ಮಾತನಾಡಿ, ಕಾರ್ಯನಿರತ ಪತ್ರಕರ್ತರ ಸಂಘದಿಂದ ವಿನೂತನ ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿದ್ದೇವೆ ಎಂದರು.
ಇದೇ ವೇಳೆ ಮಣಿಪಾಲ್ ಆರೋಗ್ಯ ಕಾರ್ಡ್ ಹಸ್ತಾಂತರ ಕಾರ್ಯಕ್ರಮ ನಡೆಯಿತು.
ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಸೀತಾರಾಮ ರೈ ಸವಣೂರು, ಗುಜರಾತ್ ಉದ್ಯಮಿ, ಗ್ರೀನ್ ಹೀರೋ ಆಫ್ ಇಂಡಿಯಾ ಡಾ. ಆರ್.ಕೆ ನಾಯರ್ ಮಾತನಾಡಿ ಶುಭ ಹಾರೈಸಿದರು.
ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್, ಬೆಳ್ಳಿ ಹಬ್ಬ ಸಮಿತಿಯ ಅಧ್ಯಕ್ಷ ಗಂಗಾಧರ ಮಟ್ಟಿ, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯದರ್ಶಿ ಗಂಗಾಧರ ಕಲ್ಲಪಳ್ಳಿ, ತಾಲೂಕು ಸಂಘದ ಕೋಶಾಧಿಕಾರಿ ದಯಾನಂದ ಕಲ್ನಾರ್, ಬೆಳ್ಳಿಹಬ್ಬ ಸಮಿತಿಯ ಕೋಶಾಧಿಕಾರಿ ಗಿರೀಶ್ ಅಡ್ಪಂಗಾಯ,ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದಯಾನಂದ ಕೊರತ್ತೋಡಿ ಉಪಸ್ಥಿತರಿದ್ದರು.