ಉಳ್ಳಾಲ : ಸೋಮೇಶ್ವರ ಪುರಸಭೆ ಚುನಾವಣೆ-ನೂತನ ಸದಸ್ಯರಿಗೆ ಅಭಿನಂದನೆ
ಸೋಮೇಶ್ವರ ಪುರಸಭೆಯಾಗಿ ಮೇಲ್ದರ್ಜೆಗೊಂಡ ಬಳಿಕ ಮೊದಲ ಬಾರಿಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯನ್ನು ಪ್ರಚಂಡ ಬಹುಮತದಿಂದ ವಿಜಯಿಗೊಳಿಸಿದ ಮತದಾರ ಬಂಧುಗಳಿಗೆ, ಕಾರ್ಯಕರ್ತರಿಗೆ ಹಾಗೂ ನೂತನ ಸದಸ್ಯರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ನಡೆಯಿತು.
ಹಿರಿಯರಾದ ಸೀತಾರಾಮ ಬಂಗೇರಾ ರವರು ದೀಪ ಪ್ರಜ್ವಲನೆಗೊಳಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಸಂಸದರಾದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ತಿನ ಶಾಸಕರಾದ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾದ ಸತೀಶ್ ಕುಂಪಲ, ಜಿಲ್ಲಾ ಉಪಾಧ್ಯಕ್ಷರಾದ ಸಂತೋಷ್ ಕುಮಾರ್ ರೈ ಬೋಳಿಯಾರ್ ಹಾಗೂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿರುವ ಮಂಡಲ ಉಪಾಧ್ಯಕ್ಷರಾದ ಯಶವಂತ ಅಮೀನ್ ರವರು ಅಭಿನಂದನೆಯ ಮಾತುಗಳನ್ನಾಡಿದರು. ನೂತನ ಸದಸ್ಯರಿಗೆ ಹಾಗೂ ಸ್ಪರ್ಧಿಸಿದ ಅಭ್ಯರ್ಥಿಗಳಿಗೆ ಸಂಸದರು ಶಾಲು ಹೊದಿಸಿ ಗೌರವಿಸಿದರು.