ಸೌಜನ್ಯ ಪ್ರಕರಣ: ಮರು ತನಿಖೆಗಾಗಿ ಕೇಂದ್ರಕ್ಕೆ ಪತ್ರ ಬರೆಯಲು ರಾಜ್ಯ ಸರ್ಕಾರ ಸಿದ್ಧ..!
ಸೌಜನ್ಯ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ರಾಜ್ಯದ ವಿವಿಧೆಡೆ ಪ್ರತಿಭಟನೆಗಳು ನಡೆಯುತ್ತಿರುವ ಬೆನ್ನಲ್ಲೇ ಸಿದ್ದರಾಮಯ್ಯ ನೇತೃತ್ವದ ಸರಕಾರ ಮರು ತನಿಖೆ ಕುರಿತು ಮಹತ್ವದ ನಿರ್ಧಾರ ತಳೆದಿದೆ. ಈ ವಿಚಾರಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ.
ಸೌಜನ್ಯ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ರಾಜ್ಯ ಸರ್ಕಾರ ಸಿದ್ಧವಿದ್ದು, ಅದಕ್ಕೂ ಮುನ್ನ ಸೌಜನ್ಯ ಪೋಷಕರು ಮರುತನಿಖೆಗೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಬೇಕಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ಸಾಹಿತಿಗಳೊಂದಿಗೆ ಸಭೆ ನಡೆಸಿದ ಸಂದರ್ಭ ಸಾಹಿತಿಗಳು ಸೌಜನ್ಯ ಪ್ರಕರಣ ಮರು ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಮಾಡಬೇಕು ಎಂದು ಒತ್ತಾಯಿಸಿದರು.
ಅದಕ್ಕೆ ಉತ್ತರಿಸಿದ ಸಿದ್ದರಾಮಯ್ಯ, ಸೌಜನ್ಯ ಕೊಲೆ ಪ್ರಕರಣ ಮರುತನಿಖೆ ನಡೆಸುವಂತೆ ಆಕೆಯ ಪೆÇೀಷಕರು ಕೇಂದ್ರ ಸರ್ಕಾರವನ್ನು ಕೋರಬೇಕಿದೆ. ಅದರ ಬೆನ್ನಲ್ಲೇ ರಾಜ್ಯ ಸರ್ಕಾರವೂ ಮರುತನಿಖೆ ನಡೆಸಲು ಪತ್ರ ಬರೆಯಲಿದೆ. ಅಲ್ಲದೆ, ಪ್ರಕರಣ ಕುರಿತು, ಮರುತನಿಖೆ ನಡೆಸಲು ಕೇಂದ್ರದ ಮೇಲೆ ಒತ್ತಡ ತರುವ ಬಗ್ಗೆ ಅಡ್ವಕೇಟ್ ಜನರಲ್ ಅವರೊಂದಿಗೆ ಚರ್ಚಿಸುತ್ತೇನೆ ಎಂದು ಹೇಳಿದರು.