ಶ್ರೀ ವೆಂಕಟರಮಣ ದೇವಳದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ

ಮಂಗಳೂರು : ಶ್ರೀ ಕಾಶೀಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಶುಭ ಕೃತ ನಾಮ ಸಂವತ್ಸರದ ಚಾತುರ್ಮಾಸ ವ್ರತ ನಡೆಯುತ್ತಿದ್ದು ಶ್ರೀ ವೆಂಕಟರಮಣ ದೇವಸ್ಥಾನ ದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ನಡೆಯಿತು . ಈ ಸಂದರ್ಭದಲ್ಲಿ ವಿಶೇಷ ಅಭಿಷೇಕಗಳು , ಅಷ್ಟಾವಧಾನ ಸೇವೆ , ಭರತನಾಟ್ಯ ಸೇವೆಗಳು ನಡೆದವು , ಕಾಶೀ ಮಠಾಧೀಶರಾದ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ಶ್ರೀ ದೇವರ ಮಹಾಮಂಗಳಾರತಿ ನೆರವೇರಿತು .

Sri Venkataramana Temple mangalore
Sri Venkataramana Temple mangalore

ಈ ಸಂದರ್ಭದಲ್ಲಿ ದೇವಳದ ಆಡಳಿತ ಮೊಕ್ತೇಸರರಾದ ಅಡಿಗೆ ಬಾಲಕೃಷ್ಣ ಶೆಣೈ , ಸಾಹುಕಾರ್ ಕಿರಣ್ ಪೈ , ಸತೀಶ್ ಪ್ರಭು , ಕೆ ಗಣೇಶ್ ಕಾಮತ್ , ಜಗನ್ನಾಥ್ ಕಾಮತ್ ದೇವಳದ ತಂತ್ರಿಗಳಾದ ಪಂಡಿತ್ ನರಸಿಂಹ ಆಚಾರ್ಯ ಚಾತುರ್ಮಾಸ ಸಮಿತಿಯ ಗೌರವ ಅಧ್ಯಕ್ಷ ಮುಂಡ್ಕುರ್ ರಾಮದಾಸ್ ಕಾಮತ್ , ಬಿ . ಆರ್ . ಭಟ್ , ನಾಮದೇವ್ ಮಲ್ಯ , ಗಣಪತಿ ಪೈ , ಸುರೇಶ್ ಕಾಮತ್, ಗುರುದತ್ ಕಾಮತ್ ಉಪಸ್ಥಿತರಿದ್ದರು .

Related Posts

Leave a Reply

Your email address will not be published.