ಶ್ರೀಹರಿಕೋಟಾ: ಇಸ್ರೋದ 101ನೇ ಉಪಗ್ರಹ ಉಡಾವಣೆ ವಿಫಲ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಶ್ರೀಹರಿಕೋಟಾದಿಂದ ತನ್ನ 101ನೇ ರಾಕೆಟ್ ಉಡಾವಣೆಯನ್ನು ಕೈಗೊಂಡಿದೆ. ಆದರೆ ಈ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ ಎಂದು ಇಸ್ರೋ ಮುಖ್ಯಸ್ಥ ವಿ.ನಾರಾಯಣನ್ ತಿಳಿಸಿದ್ದಾರೆ.
ಭಾನುವಾರ ಬೆಳಗ್ಗೆ ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾದ ಇಸ್ರೋದ 101 ನೇ ಬಾಹ್ಯಾಕಾಶ ಯಾನವು ಉಡಾವಣೆಯಾದ ಸ್ವಲ್ಪ ಸಮಯದ ನಂತರ ತಾಂತ್ರಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ವಿಫಲವಾಗಿದೆ. ಪಿಎಸ್‌ಎಲ್‌ವಿ-ಸಿ೬೧ ಉಡಾವಣೆ ವಿಫಲವಾದ ಬಗ್ಗೆ ಇಸ್ರೋ ಮುಖ್ಯಸ್ಥ ವಿ. ನಾರಾಯಣನ್ ಅವರೇ ಮಾಹಿತಿ ನೀಡಿದ್ದಾರೆ.
ಇಸ್ರೋ ಸಂಸ್ಥೆ ಉಡಾವಣೆಗೆ ಪ್ರಯತ್ನಿಸಿದ್ದ ಇಒಎಸ್-09 ಉಪಗ್ರಹವು ಯಶಸ್ವಿ ಆಗಿದ್ದರೇ ಇದು ನಮಗೆ ಗಡಿ ಕಾಯುವಿಕೆ, ಬೇಹುಗಾರಿಕೆ, ರಾಷ್ಟ್ರೀಯ ಭದ್ರತೆಗೆ ಸಾಥ್ ನೀಡುತ್ತಿತ್ತು. ವಿಪತ್ತು ನಿರ್ವಹಣೆ ಸಮಯದಲ್ಲೂ ಸಹ ನೆರವಾಗುತ್ತಿತ್ತು. ಆದರೆ ಈಗ ತಾಂತ್ರಿಕ ಕಾರಣದಿಂದ ಉಡಾವಣೆ ಯಶಸ್ವಿ ಆಗಲಿಲ್ಲ ಎನ್ನಲಾಗಿದೆ.
ಇಂದು ೧೦೧ ನೇ ಉಡಾವಣೆಯನ್ನು ಪ್ರಯತ್ನಿಸಲಾಯಿತು, ಪಿಎಸ್‌ಎಲ್‌ವಿ-ಸಿ ೬೧ ಕಾರ್ಯಕ್ಷಮತೆ ೨ ನೇ ಹಂತದವರೆಗೆ ಸಾಮಾನ್ಯವಾಗಿತ್ತು. 3 ನೇ ಹಂತದಲ್ಲಿ ತಾಂತ್ರಿಕ ಸಮಸ್ಯೆ ಎದುರಾಗದ್ದು, ಕಾರ್ಯಾಚರಣೆ ಸಾಧಿಸಲು ಸಾಧ್ಯವಾಗಲಿಲ್ಲ ಎಂದು ತಿಳಿಸಿದೆ.