ಧರ್ಮಸ್ಥಳ ಧರ್ಮಾಧಿಕಾರಿಯವರಿಗೆ ಶ್ರೀನಿವಾಸ ವಿವಿ ಕುಲಾಧಿಪತಿಗಳಿಂದ ಅಭಿನಂದನೆ

ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಾಧಿಪತಿ ಹಾಗೂ ಎ.ಶಾಮರಾವ್ ಪ್ರತಿಷ್ಠಾನದ ಅಧ್ಯಕ್ಷ ಡಾ.ಸಿ.ಎ.ಎ.ರಾಘವೇಂದ್ರರಾವ್ ಅವರು ಧರ್ಮಸ್ಥಳಕ್ಕೆ ಭೇಟಿ ನೀಡಿ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮವಿಭೂಷಣ ಡಾ.ಡಿ.ವೀರೇಂದ್ರ ಹೆಗಡೆ ಅವರನ್ನು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಶ್ರೀನಿವಾಸ ವಿವಿ ಯ ಗೌರವಾನ್ವಿತ ಸಹ ಕುಲಾಧಿಪತಿ ಹಾಗೂ ಎ.ಶಾಮರಾವ್ ಪ್ರತಿಷ್ಠಾನದ ಉಪಾಧ್ಯಕ್ಷ ಡಾ.ಎ.ಶ್ರೀನಿವಾಸ್ ರಾವ್ ಮತ್ತು ಗೌರವಾನ್ವಿತ ಕುಲಾಧಿಪತಿಗಳಾದ ಡಾ.ಸಿ.ಎ.ಎ.ರಾಘವೇಂದ್ರರಾವ್ ಅವರು ಡಾ .ಡಿ.ವೀರೇಂದ್ರ
ಹೆಗ್ಡೆ ಅವರ ರಾಜ್ಯಸಭಾ ಅವಧಿಯು ಸುಖಕರವಾಗಿರಲಿ ಹಾಗೂ ಯಶಸ್ಸು ಅವರ ಜತೆಗಿರಲಿ ಎಂದು ಶುಭ ಹಾರೈಸಿದರು. ದೇಶದಲ್ಲಿ ಹಾಗೂ ರಾಜ್ಯದಲ್ಲಿ ಪ್ರಸ್ತುತ ಶಿಕ್ಷಣದ ಸನ್ನಿವೇಶದ ಬಗ್ಗೆ ಅವರು ಚರ್ಚಿಸಿದರು. ಶ್ರೀನಿವಾಸ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಪಿ.ಎಸ್.ಐತಾಳ್ ಮತ್ತು ಮೌಲ್ಯಮಾಪನ ರಿಜಿಸ್ಟ್ರಾರ್ ಡಾ.ಶ್ರೀನಿವಾಸ್ ಮಯ್ಯ ಡಿ., ಅಭಿವೃದ್ಧಿ ರಿಜಿಸ್ಟ್ರಾರ್ ಡಾ.ಅಜಯ್ ಕುಮಾರ್, ರಿಜಿಸ್ಟ್ರಾರ್ ಡಾ.ಅನಿಲ್ ಕುಮಾರ್ ಉಪಸ್ಥಿತರಿದ್ದರು.
