ಮೇ 9ರಂದು ಎಸೆಸೆಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟ

2023-24ನೇ ಪ್ರಸಕ್ತ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಮೇ 9ರಂದು ಪ್ರಕಟಗೊಳ್ಳಲಿದೆ.

ಮಾರ್ಚ್ 25 ರಿಂದ ಎಪ್ರಿಲ್ 06ರವರೆಗೆ ಎಸೆಸೆಲ್ಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಈಗ ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯಗೊಂಡಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ತಿಳಿಸಿದೆ.

Related Posts

Leave a Reply

Your email address will not be published.