ವಿಶ್ವಾಸ್ ವಿ.ಅಮೀನ್ ಸಾರಥ್ಯದಲ್ಲಿ ರಾಗ್ ರಂಗ್ ಕಲ್ಚರಲ್ & ಸ್ಪೋರ್ಟ್ಸ್ ಕ್ಲಬ್ ವತಿಯಿಂದ “ಸ್ಟಾರ್ ನೃೆಟ್” ಸಾಂಸ್ಕೃತಿಕ ಕಾರ್ಯಕ್ರಮ

ಪಡುಬಿದ್ರಿ ರಾಗ್ ರಾಂಗ್ ಕಲ್ಚರಲ್ ಕ್ಲಬ್ (ರಿ) ವತಿಯಿಂದ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ 20 ನೇ ವರ್ಷದ ” ಸ್ಟಾರ್ ನೃೆಟ್” ಸಾಂಸ್ಕೃತಿಕ ಕಾರ್ಯಕ್ರಮವು ವಿಶ್ವಾಸ್ ವಿ.ಅಮೀನ್ ಸಾರಥ್ಯದಲ್ಲಿ ಮಾರ್ಚ್ 21 ರಂದು ರಾತ್ರಿ 8:00 ಗಂಟೆಗೆ ದೇವಸ್ಥಾನದ ವಠಾರದಲ್ಲಿ ಅದ್ದೂರಿ ವೇದಿಕೆಯಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಗಣ್ಯಾತೀ ಗಣ್ಯರು ಹಾಗು ಕನ್ನಡ ಮತ್ತು ತುಳು ಚಿತ್ರರಂಗದ ಖ್ಯಾತ ನಟ ನಟಿಯರು ಭಾಗವಹಿಸಲಿದ್ದು, ವಿವಿಧ ವಿಭಾಗದ ಸಾಧಕರಿಗೆ ಸನ್ಮಾನ ಮತ್ತು ಜಿಲ್ಲೆಯ ಪ್ರಸಿದ್ಧ ನೃತ್ಯ ತಂಡದವರಿಂದ ”ನೃತ್ಯ ವೃೆಭವ”ಕೇರಳ ಮತ್ತು ಜಿಲ್ಲೆಯ ಸುಪ್ರಸಿದ್ಧ ಸಂಗೀತಾ ಕಲಾವಿದರೂಳಗೊಂಡ ಶಶಿ ಮ್ಯೂಸಿಕಲ್ ಪಡುಬಿದ್ರಿ ತಂಡದವರಿಂದ ಸಂಗೀತ ರಸಮಂಜರಿ ಕಾರ್ಯಕ್ರಮವು ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ ವಿಶ್ವಾಸ್ ವಿ.ಅಮೀನ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

Related Posts

Leave a Reply

Your email address will not be published.