ವಿಧಾನಸಭೆಯಿಂದ ಅಮಾನತುಗೊಂಡ ಬಿಜೆಪಿ ಶಾಸಕರು ಅಮಾನತು
ಬೆಂಗಳೂರು: ಆಡಳಿತ ಮತ್ತು ವಿರೋಧ ಪಕ್ಷದ ನಾಯಕರ ಮಾತಿನ ಚಕಮಕಿ ನಡೆದು ಸದನದಲ್ಲಿ ಬಜೆಪಿ ಶಾಸಕರು ವಿಧಾನಸಭೆ ಉಪ ಸಭಾಧ್ಯಕ್ಷರ ಮೇಲೆ ಕಾಗದ ಚೂರುಗಳನ್ನು ತೂರಿದ ಘಟನೆಗೆ ಸಂಬಂಧಿಸಿ 10 ಮಂದಿ ಬಿಜೆಪಿ ಶಾಸಕರನ್ನು ವಿಧಾನಸಭೆಯಿಂದ ಅಧಿವೇಶನ ಮುಗಿಯುವವರೆಗೆ ಅಮಾನತು ಮಾಡಲಾಗಿದೆ.
ಅಶ್ವತ್ಥ ನಾರಾಯಣ, ಆರ್.ಅಶೋಕ್, ವೇದವ್ಯಾಸ ಕಾಮತ್, ಅರಗಜ್ಞಾನೇಂದ್ರ, ಸುನೀಲ್ ಕುಮಾರ್, ಅರವಿಂದ ಬೆಲ್ಲದ್, ಯಶ್‍ಪಾಲ್ ಸುವರ್ಣ, ಧೀರಜ್ ಮುನಿರಾಜ್, ಉಮಾನಾಥ್ ಕೋಟ್ಯಾನ್, ಭರತ್ ಶೆಟ್ಟಿಯವರ ಹೆಸರನ್ನು ಉಲ್ಲೇಖಿಸಿದ ಸ್ಪೀಕರ್ ಯು.ಟಿ ಖಾದರ್ ಅಮಾನತು ಮಾಡಿ ಆದೇಶ ಹೊರಡಿಸಿದರು. ಬಿಜೆಪಿ ಸದಸ್ಯರಿಂದ ಡೆಪ್ಯುಟಿ ಸ್ಪೀಕರ್ ಮೇಲೆ ಕಾಗದ ಪತ್ರ ಎಸೆಯಲಾಗಿದ್ದು, ಈ ಬಗ್ಗೆ ಸ್ಪೀಕರ್‍ಗೆ ಬಿಜೆಪಿ ಶಾಸಕರ ವಿರುದ್ಧ ಕಾಂಗ್ರೆಸ್ ಸದಸ್ಯರು ದೂರು ನೀಡಿದ್ದರು.