ರಾಜ್ಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ಮಲ್ಲಕಂಬ ಸ್ಪರ್ಧೆ: ಆಳ್ವಾಸ್ ಶಾಲೆಗೆ ತಂಡ ಪ್ರಶಸ್ತಿ

ಮೂಡುಬಿದಿರೆ: ನ. 18ರಿಂದ 20ರವರೆಗೆ ನಡೆದ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಬಾಗಲಕೋಟೆ, ಉಪ ನಿರ್ದೇಶಕರ ಕಾರ್ಯಾಲಯ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಬಾಗಲಕೋಟೆ, ಹ.ಉ.ಪೂ ಸರಕಾರಿ ಪ್ರೌಢ ಶಾಲೆ, ತುಳಸಿಗಿರಿ, ಸರಕಾರಿ ಕುವೆಂಪು ಶತಮಾನೋತ್ಸವ ಮಾದರಿ ಪ್ರಾಥಮಿಕ ಶಾಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆ, ಜೆ.ಪಿ ತುಳಸಿಗಿರಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ 14ವರ್ಷ ಮತ್ತು 17 ವರ್ಷ ವಯೋಮಿತಿಯ ಪ್ರಾಥಮಿಕ, ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ರಾಜ್ಯ ಮಟ್ಟದ ಮಲ್ಲಕಂಬ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಮಲ್ಲಕಂಬ ತಂಡವು 14 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ಮತ್ತು 17ವರ್ಷ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ಚಾಂಪಿಯನ್ ಮತ್ತು 14ವರ್ಷ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ಮತ್ತು 17 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

ಮುಂದಿನ ತಿಂಗಳು ನಡೆಯುವ ರಾಷ್ಟ್ರೀಯ ಮಲ್ಲಕಂಬ ಸ್ಪರ್ಧೆಗೆ ಆಳ್ವಾಸ್ ಶಾಲೆಯಿಂದ 08 ಕ್ರೀಡಾಪಟುಗಳು ಆಯ್ಕೆಯಾಗಿರುತ್ತಾರೆ.

ಫಲಿತಾಂಶ:
14 ವರ್ಷದ ವಯೋಮಿತಿಯ ಬಾಲಕರ ವಿಭಾಗದಲ್ಲಿ: ಕಿರಣ್ ಎಲ್ಲಪ್ಪ – ಪ್ರಥಮ ಸ್ಥಾನ, ಮಲ್ಲಿಕಾರ್ಜುನ – ತೃತೀಯ ಸ್ಥಾನ
14 ವರ್ಷದ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ: ಸಿಂಚನಾ – ತೃತೀಯ ಸ್ಥಾನ, ರಿಸರ್ವ್ ಫ್ಲೇಯರ್ – ಪೂಜಾ
17 ವರ್ಷದ ವಯೋಮಿತಿಯ ಬಾಲಕರ ವಿಭಾಗದಲ್ಲಿ: ಆದಿತ್ಯ – ತೃತೀಯ ಸ್ಥಾನ, ಆಕಾಶ್ – ನಾಲ್ಕನೇ ಸ್ಥಾನ
17 ವರ್ಷದ ವಯೋಮಿತಿಯ ಬಾಲಕರ ವಿಭಾಗದಲ್ಲಿ: ರಕ್ಷಿತಾ – ತೃತೀಯ ಸ್ಥಾನ, ಸವಿತಾ – ನಾಲ್ಕನೇ ಸ್ಥಾನ

ವಿಜೇತ ಕ್ರೀಡಾಪಟುಗಳಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವರವರು ಅಭಿನಂದನೆ ಸಲ್ಲಿಸಿದ್ದಾರೆ.

Related Posts

Leave a Reply

Your email address will not be published.