ರಾಜ್ಯಮಟ್ಟದ ಪಿನ್ ಕೋಡ್ ಮಾದರಿಯ ವಾಲಿಬಾಲ್ ಪಂದ್ಯಾಟ

ನಿರಂತರವಾದ ಕಠಿಣ ಪ್ರಯತ್ನದಿಂದ ಮಾತ್ರ ಸಾಧನೆ ಮಾಡಲು ಸಾಧ್ಯ. ಸೋಲೇ ಗೆಲುವಿನ ಸೋಪಾನ ಕ್ರೀಡಾ ಕ್ಷೇತ್ರವು ಏಕಾಗ್ರತೆ ಮತ್ತು ಸ್ಪರ್ಧಾ ಮನೋಭಾವವನ್ನು ಬೆಳೆಸುತ್ತದೆ ಕ್ರೀಡೆಯಿಂದ ಶಿಸ್ತು ಸಂಯಮ ಮತ್ತು ಆರೋಗ್ಯ ವೃದ್ಧಿಸುತ್ತದೆ. ಜೀವನದಲ್ಲಿ ಉತ್ತಮ ಸಾಧನೆಗಳನ್ನು ಸಾಧಿಸಲು ಕ್ರೀಡೆಯಿಂದ ಸಾಧ್ಯ ಎಂದು ಮುಲ್ಲಡ್ಕ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲ ಫಾ. ಮಿಲ್ಟನ್ ಡಿಸೋಜಾ ಹೇಳಿದರು.
ಅವರು ಮುಂಡ್ಕೂರು ಭಾರ್ಗವ ವೇದಿಕೆಯ ಮುಂಭಾಗದಲ್ಲಿ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಮುಂಡ್ಕೂರು ಇದರ ೧೨ನೇ ವರ್ಷದ ರಾಜ್ಯಮಟ್ಟದ ಮುಕ್ತ ಪಿನ್ ಕೋಡ್ ಮಾದರಿಯ ವಾಲಿಬಾಲ್ ಪಂದ್ಯಾಟದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು . ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪದ ಸಮಿತಿಯ ಮಾಜಿ ಅಧ್ಯಕ್ಷ ರವೀಂದ್ರ ಶೆಟ್ಟಿ, ಮುಲ್ಲಡ್ಕ, ಪುರೋಹಿತ ಸತ್ಯನಾರಾಯಣ ಭಟ್, ಮುಂಡ್ಕೂರು ಗ್ರಾಮ ಪಂಚಾಯತ್ ಅಧ್ಯಕ್ಷ ದೇವಪ್ಪ ಸಪಳಿಗ ದುರ್ಗಾ ಫ್ರೆಂಡ್ಸ್ ಅಧ್ಯಕ್ಷ ಹರೀಶ್ ಸಪಳಿಗ ಮೊದಲಾದವರು ಉಪಸ್ಥಿತರಿದ್ದರು.
