ವಿದ್ಯಾರ್ಥಿಗಳಿಂದ ಶಾಲೆಯ ಶೌಚಾಲಯ ಸ್ವಚ್ಛತೆಗೊಳಿಸಿದ ದೈಹಿಕ ಶಿಕ್ಷಕ
ಶಾಲೆಯ ಶೌಚಾಲಯವನ್ನು ವಿದ್ಯಾರ್ಥಿಗಳಿಂದ ದೈಹಿಕ ಶಿಕ್ಷಕರೋರ್ವರು ಸ್ವಚ್ಛಗೊಳಿಸಿದ ಘಟನೆ ಉಡುಪಿಯ ನಿಟ್ಟೂರಿನ ಅನುದಾನಿತ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಈಗಾಗಲೇ ಸರಕಾರದಿಂದ ಈ ಕುರಿತಾಗಿ ಸುತ್ತೋಲೆ ಬಂದಿದ್ದು ಮಕ್ಕಳು ಶೌಚಾಲಯವನ್ನು ಸ್ವಚ್ಛಗೊಳಿಸಿದ್ದಲ್ಲಿ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಸಿಬ್ಬಂದಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳ ಲಾಗುವುದು ಎಂದು ಎಚ್ಚರಿಕೆ ನೀಡಲಾಗಿತ್ತು.
ಎಸ್‌ಡಿಎಂಸಿ ಸಹಕಾರದೊಂದಿಗೆ ಸ್ಥಳೀಯವಾಗಿ ಲಭ್ಯ ಸಂಪನ್ಮೂಲ ಬಳಸಿಕೊಂಡು ಸ್ವಚ್ಛತೆ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿತ್ತು ಇದೆಲ್ಲದರ ಹೊರತಾಗಿಯೂ, ಬುದ್ಧಿವಂತ ಜಿಲ್ಲೆ ಎನಿಸಿಕೊಂಡ ಉಡುಪಿಯಲ್ಲಿ ವಿದ್ಯಾರ್ಥಿಗಳಿಂದ ಶಾಲೆಯ ಶೌಚಾಲಯವನ್ನು ಸ್ವಚ್ಛಗೊಳಿಸಿರುವ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.