ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ದೇವೇಗೌಡ ದಂಪತಿ ಭೇಟಿ, ವಿಶೇಷ ಪೂಜೆ ಸಲ್ಲಿಕೆ
ಭಾರತ ಸರ್ಕಾರದ ಮಾಜಿ ಪ್ರಧಾನ ಮಂತ್ರಿ ಹಾಗೂ ರಾಜ್ಯ ಸಭಾ ಸಂಸತ್ ಸದಸ್ಯರಾದ ಹೆಚ್.ಡಿ. ದೇವೇಗೌಡ ಹಾಗೂ ಪತ್ನಿ ಶ್ರೀಮತಿ ಚೆನ್ನಮ್ಮ ದೇವೇಗೌಡ ಅವರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ವಿಶೇಷ ಪೂಜೆಗಳನ್ನು ಸಲ್ಲಿಸಿದರು.
ದೇವೇಗೌಡ ದಂಪತಿಗಳು ನಿನ್ನೆ ಮಧ್ಯಾಹ್ನ ಬೆಂಗಳೂರು ಹೆಚ್.ಎ.ಎಲ್. ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವ ನಿರೀಕ್ಷೆ ಇತ್ತು. ಆದರೆ ಸಕಲೇಶಪುರ, ಸುಬ್ರಹ್ಮಣ್ಯ ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇದ್ದ ಕಾರಣದಿಂದಾಗಿ ಅದು ರದ್ದಾಯಿತು. ನಂತರದಲ್ಲಿ ವಿಮಾನ ಮೂಲಕ ಮಂಗಳೂರು ಆಗಮಿಸಿ ರಸ್ತೆ ಮಾರ್ಗವಾಗಿ ರಾತ್ರಿಯೇ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದರು.
ದೇಗುಲಕ್ಕೆ ಆಗಮಿಸಿ ವಿಶೇಷ ಪೂಜೆಗಳನ್ನು ಸಲ್ಲಿಸುತ್ತಿದ್ದಾರೆ. ಪ್ರಸ್ತುತ ತುಲಾಭಾರ
ಸೇವೆ, ಆಶ್ಲೇಷಬಲಿ ಪೂಜೆಯನ್ನು ಎಚ್ಡಿಡಿ ದಂಪತಿಗಳು ಮಾಡುತ್ತಿದ್ದೂ ನಾಗಪ್ರತಿಷ್ಟೇ, ಮಹಾಪೂಜೆ ಸೇರಿದಂತೆ ಕೆಲವು ವಿಶೇಷ ಪೂಜೆಗಳಲ್ಲಿ ಅವರು ಭಾಗವಹಿಸಿ ಮಧ್ಯಾಹ್ನ ವೇಳೆಗೆ ಬೆಂಗಳೂರಿಗೆ ಅವರು ತೆರಳಲಿದ್ದಾರೆ ಎಂದು ತಿಳಿದು ಬಂದಿದೆ.