ಬಡ ಕುಟುಂಬಕ್ಕೆ ಆಸರೆಯಾದ ಸುಧೀರ್ ಶೆಟ್ಟಿ ಕಣ್ಣೂರು:ಕೇಶವ ಸದನದ ಗೃಹ ಪ್ರವೇಶ ಕಾರ್ಯಕ್ರಮ
ಮಂಗಳೂರು: 30ನೇ ಕೊಡಿಯಾಲ್ ಬೈಲ್ ವಾರ್ಡ್‌ನ ವಿವೇಕ ನಗರ ಬಳಿ ಮಾಜಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅವರು ಗಣೇಶ್ ಹಾಗೂ ರೋಹಿಣಿ ದಂಪತಿಗಳಿಗೆ ತಮ್ಮ ವೈಯಕ್ತಿಕ ನೆಲೆಯಲ್ಲಿ ನಿರ್ಮಿಸಿಕೊಟ್ಟ ‘ಕೇಶವ ಸದನ’ದ ಗೃಹ ಪ್ರವೇಶ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಸುಧೀರ್ ಶೆಟ್ಟಿ ಕಣ್ಣೂರು ಅವರು, “ನನ್ನ ಹುಟ್ಟುಹಬ್ಬದ ಸಂದರ್ಭದಲ್ಲಿ ಇಂತಹ ಸಮಾಜಮುಖಿ ಕೆಲಸದಲ್ಲಿ ತೊಡಗಿಕೊಂಡಿರುವುದು ಖುಷಿ ಎನಿಸುತ್ತದೆ. ನಮ್ಮ ಜೀವನದಲ್ಲಿ ಇತರರ ನೋವಿಗೆ ನೆರವಾಗುವುದನ್ನು ದೇವರು ಕೂಡಾ ಮೆಚ್ಚುತ್ತಾರೆ ಎಂದರು.
ಮಾಜಿ ಸಚಿವ ಕೃಷ್ಣ ಜೆ. ಪಾಲೇಮಾರ್ ಮಾತಾಡಿ, ”ಮಾಜಿ ಮೇಯರ್ ಅವರು ಬಡಕುಟುಂಬಕ್ಕೆ ನೆರವಾಗುವ ಮೂಲಕ ತಮ್ಮ ಸಾಮಾಜಿಕ ಬದ್ಧತೆ ಮತ್ತು ಜವಾಬ್ದಾರಿಯನ್ನು ಮೆರೆದಿದ್ದಾರೆ. ಇದೊಂದು ಮಾದರಿ ಕಾರ್ಯ. ಇಂತಹ ಕಾರ್ಯಗಳಲ್ಲಿ ಜನಪ್ರತಿನಿಧಿಗಳು ತೊಡಗಿಕೊಳ್ಳಬೇಕು. ಹುಟ್ಟುಹಬ್ಬದ ಸಂದರ್ಭದಲ್ಲಿ ನೊಂದವರ ಮುಖದಲ್ಲಿ ನಗು ಅರಳಿಸುವುದು ಶ್ಲಾಘಿಸತಕ್ಕ ವಿಚಾರ“ ಎಂದರು.
ವೇದಿಕೆಯಲ್ಲಿ ಅರೆಸ್ಸೆಸ್ ಕ್ಷೇತ್ರೀಯ ಸಂಘ ಸರಚಾಲಕ ಡಾ.ವಾಮನ್ ಶೆಣೈ, ಮಂಗಳೂರು ದಕ್ಷಿಣ ಕ್ಷೇತ್ರ ಶಾಸಕ ವೇದವ್ಯಾಸ ಕಾಮತ್, ಮಂಗಳೂರು ಮೇಯರ್ ಮನೋಜ್ ಕುಮಾರ್, ಮೋನಪ್ಪ ಭಂಡಾರಿ, ದಕ್ಷಿಣ ಮಂಡಲದ ಅಧ್ಯಕ್ಷ ರಮೇಶ್ ಕಂಡೆಟ್ಟು, ಸುದರ್ಶನ್ ಮೂಡಬಿದ್ರಿ, ಪೂರ್ಣಿಮಾ, ಮಂಜುಳಾ ರಾವ್, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ, ಕಸ್ತೂರಿ ಪಂಜ, ಮನಪಾ ಸದಸ್ಯರು, ಸ್ಥಳೀಯ ಬಿಜೆಪಿ ನಾಯಕರು ಉಪಸ್ಥಿತರಿದ್ದರು. ವಿವೇಕ್ ಅತಿಥಿಗಳನ್ನು ಸ್ವಾಗತಿಸಿದರು.