ಸುಳ್ಯ.ಗೋಣಿ ಚೀಲದಲ್ಲಿ ಯುವತಿಯ ಮೃತ ದೇಹ – ಪತಿ ಇಮ್ರಾನ್ ಪರಾರಿ

ಸುಳ್ಯ.ಗೋಣಿ ಚೀಲದಲ್ಲಿ ಯುವತಿಯ ಮೃತ ದೇಹ – ಪತಿ ಇಮ್ರಾನ್ ಪರಾರಿ. ಯುವತಿಯ ಮೃತದೇಹವನ್ನು ಕತ್ತರಿಸಿ ಪ್ರಿಡ್ಜ್‌ ನಲ್ಲಿಟ್ಟ ಹೇಯ ಕೃತ್ಯ ಇತ್ತೀಚೆಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಂಡು ಬಂದಿತ್ತು. ಆ ಘಟನೆಯ ನೆನಪು ಮಾಸುವ ಮೊದಲೇ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಅದೇ ಮಾದರಿಯ ಘಟನೆಯೊಂದು ಬೆಳಕಿಗೆ ಬಂದಿದೆ.ಸುಳ್ಯದ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ ಇಮ್ರಾನ್ ಪರಾರಿಯಾದತ.

ಈತ ಮೃತ ಮಹಿಳೆಯ ಪತಿ. ಇಮ್ರಾನ್ ಕಳೆದ ಆರು ತಿಂಗಳಿನಿಂದ ಬೀರಮಂಗಲ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ. ಎರಡು ದಿನಗಳ ಹಿಂದೆ ಇಮ್ರಾನ್‌ ಊರಿಗೆ ತೆರಳುವುದಾಗಿ ತಾನು ಕೆಲಸ ಮಾಡಿಕೊಂಡಿದ್ದ ಹೊಟೇಲ್‌ ನವರಿಗೆ ತಿಳಿಸಿದ್ದ ಎನ್ನಲಾಗಿದೆ. ಇವತ್ತು ಪಕ್ಕದ ರೂಂ ನವರಿಗೆ ಸಂಶಯ ಬಂದಿದೆ. ಇಮ್ರಾನ್‌ ಹೋಗುವಾಗ ಪತ್ನಿಯನ್ನು ಜತೆಗೆ ಕರೆದುಕೊಂಡು ಹೋಗಿರಲಿಲ್ಲ. ಆದರೆ ಆತ ತೆರಳಿ ಎರಡು ದಿನವಾದರೂ ಮನೆಯಿಂದ ಯಾರೂ ಹೊರ ಬರದ ಹಿನ್ನಲೆಯಲ್ಲಿ ಸಂಶಯಗೊಂಡ ಮನೆಯವರು ಇಮ್ರಾನ್‌ ಕೆಲಸ ಮಾಡುತ್ತಿದ್ದ ಹೊಟೇಲ್ ಮಾಲೀಕರಿಗೆ ವಿಷಯ ತಿಳಿಸಿದ್ದಾರೆ. ಅಲ್ಲದೇ ಎರಡು ದಿನಗಳ ಹಿಂದೆ ಅವರ ಮನೆಯಿಂದ ಜೋರಾಗಿ ಕಿರುಚಿದ ಶಬ್ಧ ಕೇಳಿಸಿರುವುದಾಗಿಯೂ ಅವರು ತಿಳಿಸಿದ್ದಾರೆ ಎನ್ನಲಾಗಿದೆ.ಹೀಗಾಗಿ ಹೊಟೇಲ್ ಮಾಲಕರ ಮಾಹಿತಿಯ ಮೇರೆಗೆ ಇಂದು ಸಂಜೆ ಬಾಡಿಗೆ ಮನೆಗೆ ಬಂದು ಬಾಗಿಲು ಒಡೆದು ಪೊಲೀಸರು ಪರಿಶೀಲಿಸಿದಾಗ ಮನೆಯೊಳಗೆ ಗೋಣಿ ಚೀಲದಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ ಎಂದು ವರದಿಯಾಗಿದೆ.

ಸಂಶಯಿತ ಅರೋಪಿ ಪರಾರಿಯಾಗಿದ್ದಾನೆ. ಸುಳ್ಯ ಪೋಲಿಸರು ಸ್ಥಳ ಪರಿಶೀಲಿಸಿ ತನಿಖೆ ನಡೆಸುತ್ತಿದ್ದಾರೆ. ಫಿಂಗರ್ ಪ್ರಿಂಟ್ ತಜ್ಞರು ಮತ್ತು ಫೋರೆನ್ಸಿಕ್ ತಜ್ಞರು ಸ್ಥಳಕ್ಕೆ ಬರಲಿದ್ದಾರೆಂದು ತಿಳಿದುಬಂದಿದೆ.

Related Posts

Leave a Reply

Your email address will not be published.