ಸುಳ್ಯ: ಅಡಿಕೆ ಎಲೆಚುಕ್ಕಿ ರೋಗಕ್ಕೆ ಶಾಶ್ವತ ಪರಿಹಾರ: ಸಚಿವ ಮುನಿರತ್ನ

ಸುಳ್ಯ: ತೋಟಗಾರಿಕೆ, ಯೋಜನೆ ಮತ್ತು ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಮುನಿರತ್ನ ಅವರು ಇಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿಗೆ ಭೇಟಿ ನೀಡಿ, ಎಲೆ ಚುಕ್ಕಿ, ಅಡಿಕೆ ಎಲೆ ರೋಗ ಬಾಧಿಕ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸುಳ್ಯ ತಾಲೂಕಿನ ಮರ್ಕಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ರೋಗ ಬಾಧಿಕ ನಾಲ್ಕು ಕೃಷಿಕರ ತೋಟಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡು, ರೈತರ ಅಹವಾಲು ಆಲಿಸಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಮುನಿರತ್ನ ಅವರು ಈ ಭಾಗದ ಎಲೆ ಚುಕ್ಕಿ, ಅಡಿಕೆ ಎಲೆ ರೋಗ ಬಾಧಿಕ ಪ್ರದೇಶಕ್ಕೆ ಭೇಟಿ ನೀಡಿ ಮಾಹಿತಿ ಪಡೆದಿದ್ದೇನೆ, ಇದಕ್ಕೆ ಶಾಶ್ವತ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಸಚಿವ ಎಸ್.ಅಂಗಾರ ಸೇರಿದಂತೆ ಅಧಿಕಾರಿಗಳು, ಕೃಷಿಕರು ಉಪಸ್ಥಿತರಿದ್ದರು.