ಭೂಕಂಪನದಿಂದ ಹಾನಿಗೀಡಾದ ಮನೆಗೆ ಸಚಿವರ ಭೇಟಿ
ಕೆಲದಿನಗಳ ಹಿಂದೆ ಭೂಕಂಪನದಿಂದ ಹಾನಿಗೊಳಪಟ್ಟ ಸುಳ್ಯ ತಾಲೂಕಿನ ವಸಂತ ಭಟ್ ಅವರ ಮನೆಗೆ ಕಂದಾಯ ಸಚಿವರಾದ ಆರ್. ಅಶೋಕ್, ಇಂಧನ,ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸುನಿಲ್ ಕುಮಾರ್, ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಸುಳ್ಯ ತಾಲೂಕು ತಹಶೀಲ್ದಾರ್ ಅನಿತಾ ಲಕ್ಷ್ಮೀ ಅವರು ಜು.7ರ ಗುರುವಾರ ಭೇಟಿ ನೀಡಿ 45 ಸಾವಿರದ ಚೆಕ್ ವಿತರಿಸಿದರು. 5 ಲಕ್ಷ ರೂ.ಗಳ ಪರಿಹಾರ ಒದಗಿಸುವ ಭರವಸೆ ನೀಡಿದರು.