ಸುಳ್ಯ:- ಸುಲಿಗೆ ಪ್ರಕರಣವನ್ನು ಭೇಧಿಸಿದ ಬೆಳ್ಳಾರೆ ಪೊಲೀಸರು

ದ. ಕ ಜಿಲ್ಲೆಯ ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪಾಂಬಾರ್ ಎಂಬಲ್ಲಿ ಜನವರಿ 11ರಂದು ಮಧ್ಯಾಹ್ನ ಸುಮಾರು ೧-೦೦ ಗಂಟೆಯ ಸಮಯಕ್ಕೆ ಮಹಿಳೆಯೊಬ್ಬರಿಂದ ಚಿನ್ನದ ಸರವನ್ನು ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಬಗ್ಗೆ ಬೆಳ್ಳಾರೆ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳ ಪತ್ತೆಯ ಬಗ್ಗೆ ರಚಿಸಲಾದ ವಿಶೇಷ ತನಿಖಾ ತಂಡವು ಸುಲಿಗೆ ಮಾಡಿದ ನೌಶಾದ್ ಬಿ ಎ ನರಿಮೊಗರು, ಸುಲಿಗೆಗೆ ಸಹಕರಿಸಿದ ಚಂದ್ರಮೋಹನ್ ಉದ್ಯಾವರ, ಎಂಬವರನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳಿಂದ ರೂ 80,000/- ಮೌಲ್ಯದ ಚಿನ್ನದ ಸರ ಮತ್ತು ಕೃತ್ಯಕ್ಕೆ ಬಳಸಿದ ರೂ 1,00,000/- ಮೌಲ್ಯದ ಸುಜುಕಿ ಅವೆನಿಸ್ ಸ್ಕೂಟಿಯನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

ಪ್ರಕರಣದ ಪತ್ತೆಗಾಗಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸಿ. ಬಿ ರಿಷ್ಯಂತ್ ಐ ಪಿ ಎಸ್ ರವರು, ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಧರ್ಮಪ್ಪ ಕೆ ಎಸ್ ಪಿ ಎಸ್ ಮತ್ತು ರಾಜೇಂದ್ರ ಕೆಎಸ್‌ಪಿಎಸ್ ರವರುಗಳ ಮುಂದಾಳತ್ವದಲ್ಲಿ ಅರುಣ್ ನಾಗೇಗೌಡ, ಪೊಲೀಸ್ ಉಪಾಧೀಕ್ಷಕರು ಪುತ್ತೂರು ಉಪವಿಭಾಗದ, ಪುತ್ತೂರು ರವರ ನೇತೃತ್ವದಲ್ಲಿ, ಸುಳ್ಯ ವೃತ್ತ ನಿರೀಕ್ಷಕರಾದ ಮೋಹನ್ ಕೊಠಾರಿ ರವರು, ಸಂತೋಷ್ ಬಿ ಪಿ ಪೊಲೀಸ್ ಉಪ ನಿರೀಕ್ಷಕರು, ಬೆಳ್ಳಾರೆ ಪೊಲೀಸ್ ಠಾಣೆ ಮತ್ತು ಅಶೋಕ್ ಸಿಎಂ ಪೊಲೀಸ್ ಉಪನಿರೀಕ್ಷಕರು ಬೆಳ್ಳಾರೆ ಪೊಲೀಸ್ ಠಾಣೆ ರವರ ಎರಡು ವಿಶೇಷ ತನಿಖಾ ತಂಡಗಳನ್ನು ರಚಿಸಿರುತ್ತಾರೆ. ತನಿಖಾ ತಂಡದಲ್ಲಿ ದಾಮೋದರ ನಾಯ್ಕ, ಎ ಎಸ್ ಐ, ನವೀನ್ ಕಟ್ಟತ್ತಾರು , ಸತೀಶ್ ಬಿ, ಕೃಷ್ಣಪ್ಪ, ಚಂದ್ರಶೇಖರಗೌಡ, ಚಂದ್ರಶೇಖರ ಗೆಜ್ಜಳ್ಳಿ, ಮಂಜುನಾಥ, ಚೇತನ, ಪ್ರವೀಣ ಬಾರ್ಕಿ, ಸಂತೋಷ ಕೆ ಜಿ, ಜಿಲ್ಲಾ ತಾಂತ್ರಿಕ ವಿಭಾಗದ ದಿವಾಕರ, ಸಂಪತ್ತು ರವರುಗಳು ಕಾರ್ಯನಿರ್ವಹಿಸಿರುತ್ತಾರೆ .
ತನಿಖಾ ತಂಡಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಶಂಸೆಯನ್ನು ವ್ಯಕ್ತಪಡಿಸಿರುತ್ತಾರೆ. ಸಾರ್ವಜನಿಕ ವಲಯದಲ್ಲಿಯೂ ಪ್ರಶಂಸೆಯನ್ನು ವ್ಯಕ್ತಪಡಿಸಿರುತ್ತಾರೆ.

Related Posts

Leave a Reply

Your email address will not be published.