ಅನಾರೋಗ್ಯ ಪೀಡಿತ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಬಂದ ಚಾಲಕ ಕುಸಿದು ಬಿದ್ದು ಗಂಭೀರ
ಸುಳ್ಯ: ಆಟೋ ಚಾಲಕರೊಬ್ಬರು ಇದ್ದಕಿದ್ದಂತೆ ಪಾಶ್ರ್ವವಾಯುಗೆ ತುತ್ತಾಗಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಸುಳ್ಯ ನಗರದಲ್ಲಿ ನಡೆದಿದೆ. ಸದ್ಯ ಗಂಭೀರ ಸ್ಥಿತಿಯಲ್ಲಿ ಹೇಮನಾಥ್ ಆರ್.ಬಿ.(32) ಎಂಬವರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾದ ಚಾಲಕ. ಇವರು ಸುಳ್ಯ ತಾಲೂಕಿನ ದೊಡ್ಡಡ್ಕದ ರಾಜರಾಂಪುರದ ನಿವಾಸಿಯಾಗಿದ್ದಾರೆ. ಅನಾರೋಗ್ಯ ಪೀಡಿತ ವ್ಯಕ್ತಿಯೊಬ್ಬರನ್ನು ಸಂಪಾಜೆಯಿಂದ ಸುಳ್ಯದ ಕೆವಿಜಿ ಆಸ್ಪತ್ರೆಗೆ ತಮ್ಮ ಆಟೋದಲ್ಲಿ ಕರೆದುಕೊಂಡು ಬಂದಿದ್ದರು. ಈ ವೇಳೆ ಆಸ್ಪತ್ರೆಯಲ್ಲಿ ಇದ್ದಕಿದ್ದಂತೆ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ . ತಕ್ಷಣ ಆಸ್ಪತ್ರೆ ಸಿಬ್ಬಂದಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಿರುವುದಾಗಿ ತಿಳಿದು ಬಂದಿದೆ.