ಸುಳ್ಯ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ ವರ್ಗಾವಣೆ
ಸುಳ್ಯ: ಸುಳ್ಯ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ ಅವರಿಗೆ ವರ್ಗಾವಣೆಯಾಗಿದೆ. ಅವರಿಗೆ ಉಡುಪಿ ಸಿ.ಇ.ಎನ್. ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದೆ ಎಂದು ತಿಳಿದು ಬಂದಿದೆ. ಕಳೆದ ಮೂರೂವರೆ ವರ್ಷಗಳಿಂದ ನವೀನ್ ಚಂದ್ರ ಅವರು ಸುಳ್ಯ ವೃತ್ತ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸರಕಾರ ರಾಜ್ಯದಲ್ಲಿ 211 ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿ ಆ.1ರಂದು ಆದೇಶ ಮಾಡಿದೆ ಎಂದು ತಿಳಿದು ಬಂದಿದೆ.