ಸುಳ್ಯ: ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರು ಡಿಕ್ಕಿ, ಮೂವರು ಮೃತ್ಯು
ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟ ಘಟನೆ ಸುಳ್ಯದ ಅಡ್ಕಾರಿನಲ್ಲಿ ಸಂಭವಿಸಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿಗಳಾದ ಕಾರ್ಮಿಕರಾದ ಚಂದ್ರಪ್ಪ ರೇಗಪ್ಪ, ಮಾಂತೇಶ್ ಮೃತ ಕಾರ್ಮಿಕರು ಎಂದು ಗುರುತಿಸಲಾಗಿದೆ. ಹುಣಸೂರು ಕಡೆಯಿಂದ ಬಂದ ಕಾರೊಂದು ವಿರುದ್ಧ ದಿಕ್ಕಿನಲ್ಲಿ ಚಲಿಸಿ ರಸ್ತೆ ಬದಿ ನಿಂತಿದ್ದ ನಾಲ್ವರು ಕಾರ್ಮಿಕರಿಗೆ ಡಿಕ್ಕಿ ಹೊಡೆದಿದ್ದು, ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಪಕ್ಕದಲ್ಲಿ ನಿಂತಿದ್ದ ಲಾರಿಗೂ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆಯಿತು. ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.