ಸುಳ್ಯ: ಗ್ರಾ.ಪಂ ಗ್ರಂಥಾಲಯ, ಮಾಹಿತಿ ಕೇಂದ್ರಗಳಿಗೆ ಲ್ಯಾಪ್‍ಟಾಪ್, ಮೋನಿಟರ್ ಕೊಡುಗೆ
ಕರ್ನಾಟಕ ಸರಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಶಿಕ್ಷಣ ಪೌಂಡೇಶನ್ ಮತ್ತು ಡೆಲ್ ಟೆಕ್ನಲಾಜಿ ಸಹಭಾಗಿತ್ವದಲ್ಲಿ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ನಡೆಯುತ್ತಿರುವ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮದಡಿ ಆಯ್ಕೆಯಾದ ಸುಳ್ಯ ತಾಲೂಕಿನ ಎಂಟು ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳಿಗೆ ಕೊಡುಗೆಯಾಗಿ ನೀಡುವ ಲ್ಯಾಪ್‍ಟಾಪ್, ಮೋನಿಟರ್‍ಗಳನ್ನು ಸುಳ್ಯ ಶಾಸಕರಾದ ಭಾಗೀರಥಿ ಮುರುಳ್ಯ ಹಸ್ತಾಂತರಿಸಿದರು.
ಸುಳ್ಯ ತಾಲೂಕು ಪಂಚಾಯತ್ ಮಿನಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾ.ಪಂ.ಇಓ ರಾಜಣ್ಣ, ಗ್ರಾಮ ಡಿಜಿ ವಿಕಸನದ ಜಿಲ್ಲಾ ಸಂಯೋಜಕ ಲವೀಶ್ ಕುಮಾರ್, ತಾಲೂಕು ಸಂಯೋಜಕ ದಿನೇಶ್, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಂಥಾಲಯ ಮೇಲ್ವಿಚಾರಕರು, ಅಧ್ಯಕ್ಷರು, ತಾ.ಪಂ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.