ಸುಳ್ಯ: ಗೂನಡ್ಕದ ತೆಕ್ಕಿಲ್ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ

ಸುಳ್ಯ: ಗೂನಡ್ಕದ ತೆಕ್ಕಿಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಡಗರದಿಂದ 75ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಉನೈಸ್ ಪೆರಾಜೆಯವರು ಧ್ವಜಾರೋಹಣಗೈದು,ಭಾರತದ ಸರ್ವ ಪ್ರಜೆಗೂ ಸಮಾನತೆ, ಶಿಕ್ಷಣ, ಇತರೆ ಹಕ್ಕುಗಳನ್ನು ನೀಡಿರುವ ಸಂವಿಧಾನವನ್ನು ಜಾರಿಗೆ ತರಲು ಶ್ರಮಿಸಿದ ಎಲ್ಲ ನಾಯಕರನ್ನು, ಅವರ ಸಾಧನೆಯನ್ನು ನೆನೆದು, ಸಂವಿಧಾನದ ಮಹತ್ವವನ್ನು ತಿಳಿಸಿದರು. ಈ ಸಂದರ್ಭ ಶಾಲಾ ಶಿಕ್ಷಕ ವೃಂದ, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಸಂಪತ್ ಜೆ ಡಿ ಸ್ವಾಗತಿಸಿ,ಶ್ರೀಮತಿ ನೌಫಿಯ ವಂದಿಸಿದರು. ವಿದ್ಯಾರ್ಥಿಗಳಿಂದ ದೇಶ ಭಕ್ತಿಯನ್ನು ಸಾರುವ ಹಲವಾರು ಕಾರ್ಯಕ್ರಮಗಳು ಮೂಡಿ ಬಂದವು.

Related Posts

Leave a Reply

Your email address will not be published.