ಭಜನೆ ಹಾಗೂ ಭಜಕರ ವಿರುದ್ಧ ಫೇಸ್ಬುಕ್ ಪೋಸ್ಟ್ : ವಿಶ್ವ ಹಿಂದೂ ಪರಿಷತ್ ಬಜರಂಗದಳ ಸುಳ್ಯ ಪ್ರಖಂಡ ಇದರ ವತಿಯಿಂದ ಪ್ರತಿಭಟನೆ

ಸುಳ್ಯ . ಸರಕಾರದ ಅರಣ್ಯ ಇಲಾಖೆ ಯಲ್ಲಿ ಇದ್ದುಕೊಂಡು ಭಜನೆ ಮತ್ತು ಬಜಕರ ಬಗ್ಗೆ ಹಿಂದೂ ದೇವರ ಬಗ್ಗೆ ನಿಂದನೆಯ ಪೋಸ್ಟುಗಳನ್ನು ತನ್ನ ಫೇಸ್ಬುಕ್ ನಲ್ಲಿ ಹರಿಯ ಬಿಟ್ಟು ಹಿಂದುಗಳ ಭಾವನೆಗೆ ದಕ್ಕೆ ತಂದಿರುವ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ವಿರುದ್ಧ ಪ್ರಕರಣ ದಾಖಲಾಗಿದ್ದರು ಕೂಡ ಬಂಧನ ಮಾಡದ ಅಧಿಕಾರಿಗಳ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಇಂದು ಬೆಳ್ಳಾರೆ ಪೊಲೀಸ್ ಠಾಣಾ ಎದುರು ಬೃಹತ್ ಪ್ರತಿಭಟನೆ ನಡೆಸಿದರು

ಮುಂದಿನ ದಿನದಲ್ಲಿ ಉಪ ವಲಯ ಅರಣ್ಯ ಅಧಿಕಾರಿ ಸಂಜೀವ ಪೂಜಾರಿಯನ್ನು ಬಂಧಿಸದೇ ಇದ್ದರೆ ಮುಂದಿನ ಒಂದು ವಾರದಲ್ಲಿ ತಾಲೂಕು ಮತ್ತು ಜಿಲ್ಲಾ ಕೇಂದ್ರದಲ್ಲಿ ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಸೇರಿಸಿ ಬೃಹತ್ ಪ್ರತಿಭಟನೆಯನ್ನು ಮಾಡುವುದಾಗಿ ಎಚ್ಚರಿಕೆ ನೀಡಿದರು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಬೆಳ್ಳಾರೆ ರಾಣಾಧಿಕಾರಿ ಸುಹಾಸ್ ರವರ ಮೂಲಕ ಮನವಿಯನ್ನು ನೀಡಿದರು ಈ ಸಂದರ್ಭದಲ್ಲಿ ಸುಳ್ಯ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಕಾರ್ಯಕರ್ತರು ಹಾಗೂ ಭಜನಾ ಮಂಡಳಿಯ ಅಧ್ಯಕ್ಷರು ಸರ್ವ ಸದಸ್ಯರು ಉಪಸ್ಥಿತರಿದ್ದರು

Related Posts

Leave a Reply

Your email address will not be published.