ಸುಳ್ಯ: ಎನ್‌ಎಂಸಿ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮವನ್ನು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.


ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಕಾಲೇಜಿನ ಆಡಳಿತ ಅಧಿಕಾರಿ ಚಂದ್ರಶೇಖರ್ ಪೇರಾಲ್ ಮಾತನಾಡಿ, ಸಕಾರಾತ್ಮಕ ಮನೋಭಾವದೊಂದಿಗೆ ಜೀವನ ರೂಪಿಸಿಕೊಳ್ಳಿ. ಯಾವುದೇ ವೃತ್ತಿಯ ಬಗ್ಗೆ ಕೀಳರಿಮೆ ಬೇಡ. ಪಡೆದ ಪದವಿ ವಿದ್ಯಾಭ್ಯಾಸದ ನೆರವಿನಿಂದ ಉತ್ತಮ ಜೀವನ ರೂಪಿಸಿಕೊಳ್ಳುವುದು ಪ್ರಮುಖವಾದುದು ಎಂದರು.ಸಭೆಯ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ರುದ್ರ ಕುಮಾರ್ ಎಂ ಎಂ ವಹಿಸಿದ್ದರು.

ವೇದಿಕೆಯಲ್ಲಿ ಅತಿಥಿಗಳಾಗಿ ಕಾಲೇಜಿನ ಗೌರವ ಶೈಕ್ಷಣಿಕ ಸಲಹೆಗಾರರಾದ ಪ್ರೊ. ಬಾಲಚಂದ್ರ ಗೌಡ ಎಂ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ, ಐಕ್ಯೂಎಸಿ ಸಂಯೋಜಕಿ ಡಾ. ಮಮತಾ ಕೆ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.
