ಸುಳ್ಯ: ಪತ್ರಕರ್ತರ ಸಮುದಾಯ ಭವನದ ಉದ್ಘಾಟನೆ

ಅತಿಥಿ ಗೃಹ ಉದ್ಘಾಟಿಸಿದ ವಿಧಾನ ಸಭೆ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಮಾತನಾಡಿ, ಪತ್ರಕರ್ತರು ಏನು ಬರೆಯಬೇಕು ಎಂದು ಆಲೋಚಿಸದಂತೆ ಏನು ಬರೆಯಬಾರದು ಎಂಬುದನ್ನು ತಿಳಿದಿರಬೇಕು. ಹಿರಿಯ ಪತ್ರಕರ್ತರು ಯುವ ಪತ್ರಕರ್ತರಿಗೆ ಮಾರ್ಗದರ್ಶನ ನೀಡುವ ಕೆಲಸವಾಗಬೇಕಿದೆ ಎಂದರು. ಜಿಲ್ಲಾ ಕೇಂದ್ರದ ವ್ಯವಸ್ಥೆ: ಸುಳ್ಯ ಕ್ಷೇತ್ರ ಈಗಾಗಲೇ ಹಲವಾರು ರೀತಿಯಲ್ಲಿ ಅಭಿವೃದ್ಧಿ ಹೊಂದಿದೆ. ಮುಂದಕ್ಕೆ ಸುಳ್ಯಕ್ಕೆ ಜಿಲ್ಲಾ ಕೇಂದ್ರದ ಅವಶ್ಯಕತೆಯನ್ನು ನಾವು ಮಾಡಿಯೇ ಮಾಡುತ್ತೇವೆ. ನನ್ನದು ಡಂಬಾಚಾರ ಅಲ್ಲ. ಅಭಿವೃದ್ಧಿ ಕೆಲಸದಲ್ಲಿ ಜನರ ಸಹಕಾರ ಅಗತ್ಯ ಎಂದು ಸಚಿವ ಎಸ್.ಅಂಗಾರ ಹೇಳಿದರು.

ಜಿಲ್ಲಾ ಕಾರ್ಯನಿರತರ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ವಾಣಿಜ್ಯ ವಿಭಾಗ ಕಟ್ಟಡ ಉದ್ಘಾಟಿಸಿದರು. ಸುದ್ದಿ ಸಮೂಹ ಸಂಸ್ಥೆಯ ಸಂಪಾದಕ, ಆಡಳಿತ ನಿರ್ದೇಶಕ ಡಾ.ಯು.ಪಿ. ಶಿವಾನಂದ ಸ್ಮರಣ ಸಂಚಿಕೆ ಉದ್ಘಾಟಿಸಿದರು. ನಗರ ಪಂಚಾಯತ್ ಅಧ್ಯಕ್ಷ ಪ್ರೆಸ್ ಕ್ಲಬ್ ಜಂಕ್ಷನ್ ನಾಮಫಲಕ ಅನಾವರಣ ಗೊಳಿಸಿದರು. ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷ ಡಾ.ರೇಣುಕಾಪ್ರಸಾದ್ ಕೆ.ವಿ., ಗ್ರೀನ್ ಹೀರೋ ಆಫ್ ಇಂಡಿಯಾದ ಡಾ.ಆರ್.ಕೆ.ನಾಯರ್ ಜಾಲ್ಸೂರು, ಮಂಗಳೂರು ಕೆ.ಎಫ್.ಡಿ.ಸಿ. ಅಧ್ಯಕ್ಷ ಎ.ವಿ.ತೀರ್ಥರಾಮ, ಸವಣೂರು ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ.ಸೀತರಾಮ ರೈ ಸವಣೂರು, ಸುಳ್ಯ ಸೈಂಟ್ ಬ್ರಿಜಿಡ್ಸ್ ಚರ್ಚ್ ಧರ್ಮಗುರು ರೆ.ವಿಕ್ಟರ್ ಡಿಸೋಜ, ಸುಳ್ಯ ತಹಶೀಲ್ದಾರ್ ಅನಿತಾಲಕ್ಷ್ಮೀ, ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಎನ್., ವಾರ್ತಾ ಇಲಾಖೆ ಜಿಲ್ಲಾ ಹಿರಿಯ ಸಹಾಯಕ ನಿರ್ದೇಶಕ ಡಾ.ಹೆಚ್.ಜಿ.ರವಿರಾಜ್, ಮಂಗಳೂರು ಪತ್ರಕರ್ತರ ಸಂಘದ ರಾಷ್ಟ್ರೀಯ ಮಂಡಳಿ ಸದಸ್ಯ ಪಿ.ಬಿ.ಹರೀಶ್ ರೈ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ತಾರಾನಾಥ ಗಟ್ಟಿ ಕಾಪಿಕಾಡ್, ಬೆಂಗಳೂರು ಮಾಧ್ಯಮ ಅಕಾಡೆಮಿ ಸದಸ್ಯ ಬಾಳ ಜಗನ್ನಾಥ ಶೆಟ್ಟಿ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ ನಾರಾಯಣ ಬಿ., ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಚನಿಯ ಕಲ್ತಡ್ಕ, ತಾ.ಪಂ. ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಪ್ರಮುಖರಾ ಅಬ್ದುಲ್ ಗಫೂರ್, ಟಿ.ಎಂ.ಶಾಹೀದ್, ಉಜ್ವಲ್ ಎ.ಜೆ., ಶಂಕರ್ ಪೆರಾಜೆ, ಗುಣಾವತಿ ಕೊಲ್ಲಂತ್ತಡ್ಕ, ತಾರಸಿ ಕೃಷಿಕ ಪಡ್ಡಂಬೈಲು ಕೃಷ್ಣಪ್ಪ ಗೌಡ, ಡಾ.ಲೀಲಾಧರ್, ಕೆ.ಎಂ.ಮುಸ್ತಫ, ಪಿ.ಬಿ.ಮಹಮ್ಮದ್, ಶೀಲಾ ಅರುಣ್ ಕುರುಂಜಿ, ರಾಬರ್ಟ್ ಡಿಸೋಜ, ಯಶ್ವಿತ್ ಕಾಳಂಮನೆ, ದಯಾನಂದ ಕೊರತ್ತಡಿ, ಶಿವಪ್ರಸಾದ್ ಆಲೆಟ್ಟಿ ಉಪಸ್ಥಿತರಿದ್ದರು. ಪ್ರೆಸ್ ಕ್ಲಬ್ ಕಾರ್ಯದರ್ಶಿ ಗಂಗಾಧರ ಕಲ್ಲಪಳ್ಳಿ ಸ್ವಾಗತಿಸಿದರು. ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್ ಸಮಾರಂಭದ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಮ್ಮಾನ ಕಾರ್ಯಕ್ರಮ;: ಕಾರ್ಯಕ್ರಮ ದಲ್ಲಿ ಕಟ್ಟಡ ನಿರ್ಮಾಣಕ್ಕೆ ವಿವಿಧ ರೀತಿಯಲ್ಲಿ ಸಹಕಾರ ನೀಡಿದ ದಾನಿಗಳು, ಸಹಕರಿಸಿದ ಗಣ್ಯರಿಗೆ ಪ್ರೆಸ್ ಕ್ಲಬ್ ವತಿಯಿಂದ ಶಾಲು ಹೊದಿಸಿ, ಸ್ಮರಣಿಕೆ ನೀರಿ ಗೌರವಿಸಿ ಸಮ್ಮಾನಿಸಲಾಯಿತು. ಜಯಪ್ರಕಾಶ್ ಕುಕ್ಕೆಟ್ಟಿ ಸಮ್ಮಾನ ಕಾರ್ಯಕ್ರಮ ನಿರ್ವಹಿಸಿದರು. ಅತಿಥಿಗಳು ಸಮ್ಮಾನ ನೆರವೇರಿಸಿದರು.