ಸುಳ್ಯ : ಸ್ವಯಂ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ
ಬಂದೂಕಿನಿಂದ ಸ್ವಯಂ ಗುಂಡು ಹೊಡೆದುಕೊಂಡು ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸುಳ್ಯ ತಾಲೂಕಿನ ಉಬರಡ್ಕದಲ್ಲಿ ನಡೆದಿದೆ. ಮೃತ ಯುವಕನನ್ನು ಅರಂತೋಡು ಗ್ರಾಮದ ರವಿ ಎಂದು ಗುರುತಿಸಲಾಗಿದೆ.
ಈತ ಉಬರಡ್ಕ ಗ್ರಾಮದ ಬೆಳ್ರಂಪಾಡಿ ಎಂಬಲ್ಲಿನ ಗುಡ್ಡದಲ್ಲಿ ಕೋವಿಯಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಹೇಳಲಾಗಿದೆ.
ಬೆಳ್ರಂಪಾಡಿಯ ಮನೆಯೊಂದರಲ್ಲಿ ರವಿ ಕೆಲಸಮಯದಿಂದ ಕೆಲಸಕ್ಕಿದ್ದು ಕುಡಿತದ ಚಟ ಹೊಂದಿದ್ದ ಎನ್ನಲಾಗಿದೆ. ಕಳೆದ ರಾತ್ರಿ ಕೋವಿ ಹಿಡಿದು ಗುಡ್ಡಕ್ಕೆ ಹೋಗಿದ್ದ ರವಿ ಅಲ್ಲಿ ತಲೆಗೆ ಗುಂಡು ಹೊಡೆದುಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಸದ್ಯ ಸ್ಥಳಕ್ಕೆ ರಾತ್ರಿಯೇ ಪೊಲೀಸರು ಬಂದು ಮಹಜರು ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.