ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕೆವಿಜಿ ಸಮೂಹ ಸಂಸ್ಥೆಯ ಶಿಕ್ಷಕೇತರ ಸಿಬ್ಬಂದಿಗಳಿಗಾಗಿ ವಿಶೇಷ ತರಬೇತಿ ಕಾರ್ಯಾಗಾರ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಸಂಶೋಧನಾ ಅಭಿವೃದ್ಧಿ ಕೋಶದ ವತಿಯಿಂದ ಐಕ್ಯೂಎಸಿ ಸಹಯೋಗದೊಂದಿಗೆ ಕೆವಿಜಿ ಸಮೂಹ ಸಂಸ್ಥೆಗಳ ಶಿಕ್ಷಕೇತರ ಸಿಬ್ಬಂದಿಗಳಿಗಾಗಿ ಒಂದು ದಿನದ ವಿಶೇಷ ತರಬೇತಿ ಕಾರ್ಯಕ್ರಮವನ್ನು ಆ. 02 ಶನಿವಾರದಂದು ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರ ಕುಮಾರ್ ಎಮ್ ಎಮ್ ವಹಿಸಿದ್ದರು. ಕಾರ್ಯಕ್ರಮ ದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಜೆ. ಸಿ. ಐ ಇಂಡಿಯಾ ದ ಪ್ರೊವಿಷನಲ್ ನ್ಯಾಷನಲ್ ತರಬೇತುದಾರರಾದ ಜೆ.ಸಿ ಹೆಚ್.ಜಿ.ಎಫ್ ವಿಕ್ರಮ್ ನಾಯಕ್ ಭಾಗವಹಿಸಿ “ಉದ್ಯೋಗ ಸ್ಥಳದಲ್ಲಿ ಭಾವನಾತ್ಮಕ ಬುದ್ಧಿಮತ್ತೆ” ವಿಷಯದ ಕುರಿತಾಗಿ ತರಬೇತಿ ನೀಡಿದರು. ಮುಖ್ಯ ಅತಿಥಿಯಾಗಿ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ್ ಪೇರಾಲು, ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚೀಫ್ ಮ್ಯಾನೇಜರ್ ಹೆಚ್ ಆರ್ ಶಿವಪ್ರಸಾದ್ ಪಿ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭಹಾರೈಸಿದರು.
ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ, ಐ.ಕ್ಯೂ.ಎ.ಸಿ ಸಂಯೋಜಕಿ ಡಾ ಮಮತಾ ಕೆ, ಉಪಸ್ಥಿತರಿದ್ದರು. ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಕೆವಿಜಿ ಕಾನೂನು ಮಹಾವಿದ್ಯಾಲಯ, ನೆಹರೂ ಮೆಮೋರಿಯಲ್ ಪದವಿ ಪೂರ್ವ ಕಾಲೇಜು ಹಾಗೂ ನೆಹರೂ ಮೆಮೋರಿಯಲ್ ಕಾಲೇಜಿನ ಶಿಕ್ಷಕೇತರ ಸಿಬ್ಬಂದಿ ಭಾಗವಹಿಸಿ ತರಬೇತಿ ಪಡೆದುಕೊಂಡರು.
ಕಾಲೇಜಿನ ಗ್ರಂಥಪಾಲಕರಾದ ಉಮೇಶ್ ಪ್ರಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿ ಧನ್ಯವಾದಗೈದರು. ಹಿಂದಿ ವಿಭಾಗ ಮುಖ್ಯಸ್ಥೆ ಮಮ್ತಾ ಹೆಚ್. ವಿ ಸಂಪನ್ಮೂಲ ವ್ಯಕ್ತಿ ಪರಿಚಯ ಮಾಡಿದರು. ಆಫೀಸ್ ಸೂಪರಿಂಟೆಂಡೆಂಟ್ ನಿವೇದಿತಾ ಕಾರ್ಯಕ್ರಮ ನಿರೂಪಿಸಿದರು.