ಯುವಕರ ಮಧ್ಯೆ ಹೊಡೆದಾಟ ಸುಳ್ಯ ತಾಲೂಕಿನ ಕಳೆಂಜ ಎಂಬಲ್ಲಿ ಘಟನೆ

ಸುಳ್ಯ: ಮಂಗಳವಾರ ತಡ ರಾತ್ರಿ ತಂಡವೊಂದು ಯುವಕನ ಮೇಲೆ ಸೋಡಾ ಬಾಟಲಿಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಳ್ಳಾರೆಯ ಕಳಂಜ ಎಂಬಲ್ಲಿ ಕಳೆದ ರಾತ್ರಿ ಈ ಹಲ್ಲೆ ನಡೆದಿದ್ದು ಮಸೂದ್ (19) ಎಂಬವರು ಗಂಭೀರವಾಗಿ ಗಾಯಗೊಂಡವರು . ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಆತನ ಸ್ಥಿತಿ ಚಿಂತಾಜನಕವಾಗಿದೆ ಎಂದು ಮೂಲಗಳು ತಿಳಿಸಿವೆ ಮಸೂದ್ ಮೂಲತ: ಕಳಂಜದ ನಿವಾಸಿ ಅಲ್ಲ ಎನ್ನುವ ಪ್ರಾಥಮಿಕ ಮಾಹಿತಿ ಪೊಲೀಸರಿಗೆ ಲಭಿಸಿದೆ ಎನ್ನಲಾಗುತ್ತಿದೆ. ಮಸೂದ್ ಹಾಗೂ ಸ್ಥಳೀಯ ಯುವಕನ ಮಧ್ಯೆ ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಅಂಗಡಿಯೊಂದರ ಸಮೀಪ ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿದೆ . ಈ ವೇಳೆ ಪರಸ್ಪರರು ಹೊಡೆದಾಡಿಕೊಂಡಿದ್ದಾರೆ. ಸ್ವಲ್ಪ ಹೊತ್ತಿನ ಬಳಿಕ ಬೇರೆ ಯುವಕರು ಈ ಜಗಳಕ್ಕೆ ಎಂಟ್ರಿ ಕೊಟ್ಟಿದ್ದು ಈ ವೇಳೆ ಹೊಡೆದಾಟ ವಿಪರೀತಕ್ಕೆ ಹೋಗಿದೆ ಎನ್ನಲಾಗಿದೆ . ಮಾಹಿತಿ ತಿಳಿಯುತ್ತಲೇ ಬೆಳ್ಳಾರೆ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ , ತನಿಖೆ ಕೈಗೆತ್ತಿಕೊಂಡಿದ್ದಾರೆ. ಕ್ಷಿಪ್ರ ಕಾರ್ಯಚರಣೆ ನಡೆಸಿದ ಪೊಲೀಸರು ಹೊಡೆದಾಟದಲ್ಲಿ ಭಾಗಿಯಾದ 4-5 ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.ಹೆಚ್ಚಿನ ಮಾಹಿತಿ ತನಿಖೆಯಿಂದ ತಿಳಿದು ಬರಬೇಕಿದೆ

Related Posts

Leave a Reply

Your email address will not be published.