ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿ ಸುಂದರ ಮೇರ ನಾಮಪತ್ರ ಸಲ್ಲಿಕೆ
ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿ ಸುಂದರ ಮೇರ ಏ.20ರಂದು ನಾಮಪತ್ರ ಸಲ್ಲಿಸಿದರು. ಮಿನಿ ವಿಧಾನಸೌಧದ ಚುನಾವಣಾ ಕಚೇರಿಯಲ್ಲಿನ ಚುನಾವಣಾಧಿಕಾರಿಕಚೇರಿಯಲ್ಲಿ ಕ್ಷೇತ್ರದ ಚುನಾವಣಾಧಿಕಾರಿ ಅರುಣ್‌ಕುಮಾರ್ ಅವರಿಗೆ ನಾಮಪತ್ರ ಸಲ್ಲಿಸಿದರು. ಸಹಾಯಕ ಚುನಾವಣಾಧಿಕಾರಿಗಳಾದ ಜಿ.ಮಂಜುನಾಥ್, ರಮೇಶ್ ಬಾಬು ಸಹಕರಿಸಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಅಶೋಕ್ ಕೊಂಚಾಡಿ, ಜಯಪ್ರಕಾಶ್ ಕನ್ಯಾಡಿ,ಕರುಣಾಕರ ಪಳ್ಳತ್ತಡ್ಕ, ವಸಂತ ಛತ್ರಪ್ಪಾಡಿ, ತಾರನಾಥ ಕಡೀರಡ್ಕ, ದಿನೇಶ್ ಅಗತ್ತಾಡಿ, ಚಂದ್ರಹಾಸ ಪುರುಷಬೆಟ್ಟು ಮತ್ತಿತರರು ಉಪಸ್ಥಿತರಿದ್ದರು