ರಘುಪತಿ ಭಟ್ ಅವರು ದುಡುಕಿನ ನಿರ್ಧಾರ ತೆಗೆದುಕೊಳ್ಳದಂತೆ ಮನವಿ : ಸುನಿಲ್ ಕುಮಾರ್

ವಿಧಾನ ಪರಿಷತ್ ಚುನಾವಣೆಗೆ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಅವರು ಪಕ್ಷೇತರಾಗಿ ಸ್ಪರ್ಧೆ ಮಾಡುವುದಾಗಿ ನಿರ್ಧರಿಸಿದ್ದು, ಅವರ ಮನೆಗೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಭೇಟಿ ನೀಡಿ ಮಾತುಕತೆ ನಡೆಸಿದರು.
ಈ ವೇಳೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸುನೀಲ್ ಕುಮಾರ್ ಅವರು, ಪರಿಷತ್ ಚುನಾವಣೆಗೆ ಸ್ಪರ್ಧಿಸಬೇಕು ಎಂಬ ಭಾವನೆಯನ್ನು ರಘುಪತಿ ಭಟ್ ವ್ಯಕ್ತಪಡಿಸಿದ್ದಾರೆ. ದುಡುಕಿನ ತೀರ್ಮಾನ ತೆಗೆದುಕೊಳ್ಳಬೇಡಿ ಎಂದು ಹೇಳಿದ್ದೇನೆ. ಈ ಹಿಂದೆ ಹಲವು ಬಾರಿ ಫೆÇೀನ್ ನಲ್ಲಿ ಸಂಪರ್ಕ ಮಾಡಿದ್ದೆ ಇಂದು ಮುಖತಃ ಭೇಟಿಯಾಗಿದ್ದೇನೆ. ಭಟ್ ಹಲವಾರು ಭಾವನಾತ್ಮಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಅವರ ಎಲ್ಲಾ ಭಾವನೆಯ ಜೊತೆ ಗೆಳೆಯನಾಗಿ ನಾನಿದ್ದೇನೆ. ಪಕ್ಷದ ವಿರುದ್ಧ, ಪಕ್ಷ ಬಿಟ್ಟು ಅವರು ತೆಗೆದುಕೊಳ್ಳುವ ತೀರ್ಮಾನದ ಜೊತೆ ನಾನಿಲ್ಲ. ವಿಧಾನಸಭಾ ಚುನಾವಣೆಯಲ್ಲೂ ಪಕ್ಷದ ವಿರುದ್ಧ ಅವರು ನಿರ್ಧಾರ ತೆಗೆದುಕೊಂಡಿರಲಿಲ್ಲ. ಪಕ್ಷದ ಗೆಲುವಿಗೆ ಕಾರ್ಯಕರ್ತನಾಗಿ ಕೆಲಸ ಮಾಡಿದ್ದರು ಎಂದರು.
