ಸುರತ್ಕಲ್: ಸರಣಿ ಅಪಘಾತ, ಸ್ಕೂಟರ್ ಸವಾರ ಸಾವು
ಸುರತ್ಕಲ್ ವ್ಯಾಪ್ತಿಯಲ್ಲಿ ನಿನ್ನೆ ತಡರಾತ್ರಿ ಸರಣಿ ಅಪಘಾತಗಳು ನಡೆದಿದ್ದು, ಓರ್ವ ಬೈಕ್ ಸವಾರ ಮೃತಪಟ್ಟರೆ ಉಳಿದ ಅಪಘಾತಗಳಲ್ಲಿ ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ.
ಕುಳಾಯಿಯ ಹೊನ್ನಕಟ್ಟೆ ಬಳಿ ಪಿಕಪ್ ವಾಹನ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಚಿತ್ರಾಪುರದ ಬಸ್ ನಿಲ್ದಾಣದ ಸಮೀಪದಲ್ಲಿ ಸ್ಕೂಟರೊಂದು ಸ್ಕಿಡ್ ಆಗಿದ್ದು, ಸ್ಕೂಟರ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಬೈಕಂಪಾಡಿ ಸರ್ವೀಸ್ ರಸ್ತೆಯಲ್ಲಿ ಎರಡು ಬೈಕ್‍ಗಳ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರನ ಕಾಲಿಗೆ ಗಾಯವಾಗಿದೆ. ಇನ್ನು ಎನ್‍ಎಂಪಿಟಿ ಗೇಟ್ ಬಳಿ ಕಾರೊಂದು ಅಪಘಾತಗೊಂಡಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.