ಸುರತ್ಕಲ್ : ಎಟಿಎಂ ಮೆಷಿನ್ ಕಳವು ಯತ್ನ ಪ್ರಕರಣ – ನಾಲ್ವರ ಬಂಧನ

ಸುರತ್ಕಲ್ ಬಳಿಯ ಇಡ್ಯಾ ಎಂಬಲ್ಲಿ ಜೆಸಿಬಿ ಮೂಲಕ ಎಟಿಎಂ ಒಡೆದು ಹಣ ದೋಚುವ ಯತ್ನ ನಡೆದಿತ್ತು. ಪ್ರಕರಣದ ಬೆನ್ನತ್ತಿದ ಸುರತ್ಕಲ್ ಪೊಲೀಸರು ಶಿವಮೊಗ್ಗ ಮೂಲದ ನಾಲ್ವರನ್ನು ಬಂಧಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಬೇಗೂರು ಗ್ರಾಮದ ದೇವರಾಜ್ (24), ಭರತ್ (20), ನಾಗರಾಜ ನಾಯ್ಕ (21), ಕೃತ್ಯಕ್ಕೆ ಧನಸಹಾಯ ಮಾಡಿದ್ದ ಧನರಾಜ್ ನಾಯ್ಕ (26) ಬಂಧಿತರು. ಇವರಿಂದ ಹೀರೊ ಹೊಂಡಾ ಸ್ಪ್ಲೆಂಡರ್ ಬೈಕ್ ಮತ್ತು ಎರಡು ಮೊಬೈಲ್ ಗಳನ್ನು ಪೆÇಲೀಸರು ವಶಕ್ಕೆ ಪಡೆದಿದ್ದಾರೆ
ಸಿಸಿಟಿವಿ ವಿಭಾಗದಿಂದ ಬಂದ ಮಾಹಿತಿಯಂತೆ ಸ್ಥಳಕ್ಕೆ ಬ್ಯಾಂಕ್ ಶಾಖೆಯ ಮ್ಯಾನೇಜರ್ ರೋಹಿತ್ ರಾತ್ರಿಯೇ ಆಗಮಿಸಿದ್ದರು. ಅಷ್ಟರಲ್ಲಿ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು. ಮರುದಿನ ಬೈಕಂಪಾಡಿ ಬಳಿಯ ಜೋಕಟ್ಟೆಯಲ್ಲಿ ಜೆಸಿಬಿ ಪತ್ತೆಯಾಗಿತ್ತು. ಪಡುಬಿದ್ರಿಯಲ್ಲಿ ಕಳವು ಮಾಡಿದ್ದ ಜೆಸಿಬಿ ಎಂದು ಪತ್ತೆಹಚ್ಚಲಾಗಿತ್ತು. ಆರೋಪಿಗಳ ಪತ್ತೆಗೆ ಸುರತ್ಕಲ್ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿತ್ತು.
