ಹೊಸಬೆಟ್ಟು ಜಟ್ಟಿ ನಿರ್ಮಾಣಕ್ಕೆ ವಿರೋಧವಿಲ್ಲ,ನಿರ್ವಸಿತರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು : ಗ್ರಾಮಸ್ಥರಿಂದ ಆಗ್ರಹ

ಸಾಗರಮಾಲಾ ಯೋಜನೆಯಡಿ ಹೊಸಬೆಟ್ಟುವಿನಲ್ಲಿ ಜಟ್ಟಿ ನಿರ್ಮಾಣಕ್ಕೆ ನಮ್ಮದು ಯಾವುದೇ ವಿರೋಧವಿಲ್ಲ. ಆದರೆ ನಮ್ಮ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲಿನ ನಿರ್ವಸಿತರಿಗೆ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಬೇಕೆಂದು ಎಂದು ಗ್ರಾಮಸ್ಥರು ಆಗ್ರಹಿಸಿದ್ದರು.

ಅಧಿಕಾರಿಗಳು ಗ್ರಾಮಸ್ಥರ ಅಭಿಪ್ರಾಯವನ್ನು ಕೇಳದೆ, ನಮ್ಮ ನಿರ್ಧಾರಕ್ಕೆ ವಿರುದ್ಧವಾಗಿ ಕಾಮಗಾರಿ ಸಂಬಂಧ ಸರ್ವೆಗೆ ಮುಂದಾಗಿರುವುದು ಖಂಡನೀಯ. ನಮ್ಮ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು ಮತ್ತು ಜಟ್ಟಿ ನಿರ್ಮಾಣದ ಸ್ಥಳದ ಬಗ್ಗೆ ತಿಳಿಸಬೇಕು. ಈ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ ಮುಂದಿನ ನಿರ್ಣಯ ತೆಗೆದುಕೊಳ್ಳುತ್ತೇವೆ. ಇದೀಗ ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ನೀಡಿದ ಭರವಸೆ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ವಾಪಸ್ ತೆಗೆದುಕೊಂಡಿದ್ದೇವೆ ಎಂದು ಗಂಗಾಧರ್ ಗುರಿಕಾರ ಹೊಸಬೆಟ್ಟು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಹೊಸಬೆಟ್ಟು ಮೊಗವೀರ ಸಂಘ ಅಧ್ಯಕ್ಷರ ಶಂಕರ್ ವಿ ಸಾಲ್ಯಾನ್, ಉಪಾಧ್ಯಕ್ಷರು ಚಂದ್ರಹಾಸ ಸುವರ್ಣ, ಉದ್ಯಮಿ ಪುಂಡಲೀಕ ಹೊಸಬೆಟ್ಟು, ಶರತ್ ಎಲ್ ಕರ್ಕೇರ, ರವಿ ಎನ್ ಶ್ರೀಯಾನ್, ತುಷಾರ್ ಸಾಲ್ಯಾನ್, ದಿನೇಶ್ ಕಾಂಚನ್, ಪುರುಷೋತ್ತಮ ಕಾಂಚನ್, ಹೊಸ ಬೆಟ್ಟು ಮಹಿಳಾ ಸಂಘ ಹಾಗೂ ಅಧ್ಯಕ್ಷರು ಮತ್ತು ಸದಸ್ಯರು ಪಾಲ್ಗೊಂಡಿದ್ದರು.
