ನಾಲ್ಕು ವಾರ ಪೂರ್ತಿಗೊಳಿಸಿದ ಹಗಲು ರಾತ್ರಿ ಧರಣಿ

ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ನಡೆಯುತ್ತಿರುವ ಹಗಲು ರಾತ್ರಿ ಧರಣಿ ಇಂದು 28 ದಿನಗಳನ್ನು ಪೂರ್ಣಗೊಳಿಸಿತು. ವಿವಿಧ ರಾಜಕೀಯ ಪಕ್ಷ ಹಾಗೂ ಸಂಘಟನೆಗಳ ಕಾರ್ಯಕರ್ತರು ಇಂದಿನ ಧರಣಿಯಲ್ಲಿ ಪಾಲ್ಗೊಂಡರು.

ಅಧಿಸೂಚನೆ ಹೊರಟು ಹನ್ನೆರಡು ದಿನ ದಾಟಿದರೂ ಟೋಲ್ ಸಂಗ್ರಹ ಸ್ಥಗಿತಗೊಳಿಸಲು ವಿಫಲವಾಗಿರುವ ಜಿಲ್ಲಾಡಳಿತದ ವಿರುದ್ದ ಪ್ರತಿಭಟನಾ ಕಾರರು ಆಕ್ರೋಶ ವ್ಯಕ್ತಪಡಿಸಿದರು. ಮಾಜಿ ಶಾಸಕ ಮೊಯ್ದಿನ್ ಬಾವಾ ಸಹಿತ ಭಾಷಣ ಮಾಡಿದ ನಾಯಕರುಗಳು ಸ್ಥಳೀಯ ಶಾಸಕ ಭರತ್ ಶೆಟ್ಟಿಯವರ ವೈಫಲ್ಯಗಳನ್ನು ಬೊಟ್ಟು ಮಾಡಿ ವಾಗ್ದಾಳಿ ನಡೆಸಿದರು. ಕುಕ್ಕರ್ ಬಾಂಬ್ ಸ್ಪೋಟ, ಸುಬ್ರಹ್ಮಣ್ಯ ಜಾತ್ರೆಯಲ್ಲಿ ಮುಸ್ಲಿಂ ಸಂತೆ ವ್ಯಾಪಾರಿಗಳಿಗೆ ನಿರ್ಬಂಧ ಮುಂತಾದ ವಿಷಯಗಳಿಗೆ ಮತೀಯ ಬಣ್ಣ ಬಳಿದು ಟೋಲ್ ಗೇಟ್ ವಿಷಯವನ್ನು ಮುಸುಕುಗೊಳಿಸಲು ಬಿಜೆಪಿ ಶಾಸಕರುಗಳು ಹನ್ನಾರ ನಡೆಸಿದ್ದಾರೆ ಎಂದು ಆರೋಪಿಸಲಾಯಿತು.

ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ, ಮಾಜಿ ಸಚಿವ ಅಭಯ ಚಂದ್ರ ಜೈನ್, ಇನಾಯತ್ ಅಲಿ, ಮಿಥುನ್ ರೈ, ಉಮೇಶ್ ದಂಡಕೇರಿ, ಬಿ ಕೆ ಇಮ್ತಿಯಾಜ್, ಎಂ ದೇವದಾಸ್, ಶಾಲೆಟ್ ಪಿಂಟೊ, ವೈ ರಾಘವೇಂದ್ರ ರಾವ್, ಪುರುಷೋತ್ತಮ ಚಿತ್ರಾಪುರ, ಮುಹಮ್ಮದ್ ಕುಂಜತ್ತಬೈಲ್, ಮಾಜಿ ಮೇಯರ್ ಗಳಾದ ಹರಿನಾಥ್, ಕೆ ಅಶ್ರಫ್, ಶ್ರೀನಾಥ್ ಕುಲಾಲ್, ಪ್ರಮೀಳಾ, ಆನಂದ ಅಮೀನ್, ಸದಾಶಿವ ಶೆಟ್ಟಿ, ಶಮೀರ್ ಕಾಟಿಪಳ್ಳ, ಮೊಹಮ್ಮದ್ ರಫಿ, ಮುಂಜುಳಾ ನಾಯಕ್, ಸಿರಾಜ್ ಮೋನು ಉಳಾಯಿಬೆಟ್ಟು ಮತ್ತಿತರರು ಉಪಸ್ಥಿತರಿದ್ದರು