ಡಿ. 1ರಿಂದ ಸುರತ್ಕಲ್‌ನಲ್ಲಿ ಟೋಲ್ ಸಂಗ್ರಹ ಇಲ್ಲ : ದ.ಕ. ಜಿಲ್ಲಾಧಿಕಾರಿ ಆದೇಶ

ಮಂಗಳೂರು : ವಿವಾದದ ಕೇಂದ್ರ ಬಿಂದು ಸುರತ್ಕಲ್ ಟೋಲ್ ರದ್ದುಗೊಳಿಸಿ ಈಗಾಗಲೇ  ಹೆದ್ದಾರಿ ಸಚಿವಾಲಯ ಆದೇಶಿಸಿದ ಬೆನ್ನಲೇ ಡಿಸೆಂಬರ್  1 ರಿಂದ ಸುರತ್ಕಲ್‌ನಲ್ಲಿ ವಾಹನಗಳಿಂದ ಟೋಲ್ ಸಂಗ್ರಹಿಸಲಾಗುವುದಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಎಂ.ಆರ್. ರವಿ ಕುಮಾರ್ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಸುರತ್ಕಲ್ ಟೋಲನ್ನು ಹೆಜಮಾಡಿಯಲ್ಲಿ ಹೆಚ್ಚುವರಿ ಶುಲ್ಕದೊಂದಿಗೆ ವಿಲೀನಗೊಳಿಸಿರುವುದನ್ನು ಮುಂದಿಟ್ಟು ಜಿಲ್ಲಾಧಿಕಾರಿಯವರು ಈ ಆದೇಶ ಮಾಡಿದ್ದಾರೆ.

ಈ ಆದೇಶದನ್ವಯ ಡಿಸೆಂಬರ್ 1ರಿಂದ ಸುರತ್ಕಲ್‌ನಲ್ಲಿ ಟೋಲ್ ಸಂಗ್ರಹ ಇರುವುದಿಲ್ಲ ಎಂದು ತಿಳಿಸಿದ್ದಾರೆ,

Related Posts

Leave a Reply

Your email address will not be published.