ಟೋಲ್ ಗೇಟ್ ವಿರುದ್ಧ ಹೋರಾಟ ನಡೆಸುವವರನ್ನು ಹತ್ತಿಕ್ಕುವ ಕೆಲಸ ಸರಿಯಲ್ಲ : ಮಾಜಿ ಸಚಿವ ರಮಾನಾಥ ರೈ ಆಕ್ರೋಶ

ಮ.ನ.ಪಾ ಸದಸ್ಯೆ ಪ್ರತಿಭಾ ಕುಳಾಯಿ ಮನೆಗೆ ಅವರು ಇಲ್ಲದೇ ಇದ್ದಾಗ ಪೊಲೀಸರು ಮಧ್ಯರಾತ್ರಿ ವೇಳೆ ಹೋಗಿರುವುದು ಸರಿಯಾದ ಕ್ರಮವಲ್ಲ , ಆ ಹೊತ್ತಿನಲ್ಲಿ ಹೋಗಿ ಕಿರುಕುಳ ನೀಡುವ ಅವಶ್ಯಕತೆ ಇರಲಿಲ್ಲ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ತಿಳಿಸಿದ್ದು , ಇದು ಹೋರಾಟಗಾರರ ಧ್ವನಿ ಅಡಗಿಸುವ ಕೆಲಸ ಮಾಡಲಾಗುತ್ತಿದೆ . ಈ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಳ್ಳುವ ಅಗತ್ಯ ಇದೆ ಎಂದು ಹೇಳಿದ್ದಾರೆ . ಇದು ಪ್ರತಿಭಟನಾಕಾರರನ್ನು ಹತ್ತಿಕ್ಕುವ ಕಾರ್ಯವಾಗಿದ್ದು , ಹೋರಾಟಗಾರರು ತಮ್ಮ ಸ್ವಾರ್ಥಕ್ಕಾಗಿ ಮಾಡುತ್ತಿಲ್ಲ . ಜನಸಾಮಾನ್ಯರಿಗಾಗಿ ಮಾಡುತ್ತಿದ್ದಾರೆ ಎಂದು ಹೇಳಿದ ರೈ , ಸಂಘಟನೆ ಸದಸ್ಯರು ಎಲ್ಲರೂ ಇದನ್ನು ಖಂಡಿಸಬೇಕು ಎಂದರು . ಪೊಲೀಸ್ ಇಲಾಖೆ ಕೈಗೊಂಡ ಕ್ರಮ ದಬ್ಬಾಳಿಕೆ ಕ್ರಮವಾಗಿದೆ , ಪ್ರತಿಭಟನಾಕಾರರ ಹಕ್ಕು ಕಿತ್ತುಕೊಳ್ಳುವ ಕೆಲಸವಾಗುತ್ತಿದೆ ಎಂದರು .

Related Posts

Leave a Reply

Your email address will not be published.