ಸುರತ್ಕಲ್ ಟೋಲ್ ಗೇಟ್ : ಸಮಾನಮನಸ್ಕರು ಇಂದು ಬೆಳಗ್ಗೆ ಪ್ರತಿಭಟನಾ ಧರಣಿ ಆರಂಭ
ಟೋಲ್ ಗೇಟ್ ಎದುರು ಜಮಾಯಿಸಿರುವ ಪ್ರತಿಭಟನಾಕಾರರು ಬಿಜೆಪಿ ಸರ್ಕಾರ, ಸಂಸದ, ಶಾಸಕರ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ.ಸುರತ್ಕಲ್ ಟೋಲ್ ಗೇಟ್ ಅನ್ನು ಅಕ್ಟೋಬರ್ 18 ರೊಳಗೆ ರದ್ದುಪಡಿಸುವಂತೆ ಸೆ.13 ರಂದು ಸರ್ಕಾರಕ್ಕೆ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯು ಗಡುವು ನೀಡಿತ್ತು, ಸರ್ಕಾರ ತಮ್ಮ ಮನವಿಗೆ ಮಣಿಯದಿದ್ದರೆ ಅಕ್ಟೋಬರ್ 18 ರಂದು ಟೋಲ್ ಗೇಟ್‌ಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಸಿದ್ದು, ಇಮ್ದು ಪ್ರತಿಭಟನೆ ನಡೆಸುತ್ತಿದ್ದಾರೆ.ಈ ವೇಳೆ ಸುರತ್ಕಲ್ ಟೋಲ್ ಹೋರಾಟ ಸಮಿತಿಯ ಪ್ರಮುಖರಾದ ಮುನೀರ್ ಕಾಟಿಪಳ್ಳ, ಮಾತನಾಡಿ, ಟೋಲ್ ತೆಗೆಯುವುದ್ದನ್ನು ರದ್ದು ಮಾಡುವವರೆಗೆ ನಾವು ಹೋರಾಟ ನಿಲ್ಲಿಸುವುದಿಲ್ಲ. ಇಂದು ಟೋಲ್ ಪಡೆಯುವುದು ರದ್ದಾಗಲೇಬೇಕು. ಟೋಲ್ ಅಧಿಕೃತ ರದ್ದಿನ ಬಗ್ಗೆ ದಿನಾಂಕ ಘೋಷಿಸಬೇಕು ಎಂದಿದ್ದಾರೆ.ಇನ್ನು ಪ್ರತಿಭಟನ ಸ್ಥಳಕ್ಕೆ ಕಮಿಷನರ್ ಶಶಿಕುಮಾರ್ ಕೂಡ ಭೇಟಿ ನೀಡಿದ್ದು, ಅನೇಕ ಸಂಖ್ಯೆಯಲ್ಲಿ ಪೊಲೀಸ್ ಭೀಗಿ ಭದ್ರತೆ ಕೈಗೊಳ್ಳಲಾಗಿದೆ.
ಸುರತ್ಕಲ್ ಟೋಲ್ ಗೇಟ್ ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ನೇತೃತ್ವದಲ್ಲಿ ಸಮಾನಮನಸ್ಕರು ಇಂದು ಬೆಳಗ್ಗೆ ಪ್ರತಿಭಟನಾ ಧರಣಿ ಆರಂಭಿಸಿದ್ದಾರೆ.