ಸುರತ್ಕಲ್ ಅಕ್ರಮ ಟೋಲ್‍ಗೇಟ್ ವಿರುದ್ಧ ಮತ್ತೆ ಹೋರಾಟ : ಸಮಾನ ಮನಸ್ಕ ಸಂಘಟನೆಗಳಿಂದ ಹಗಲು-ರಾತ್ರಿ ಧರಣಿ

ಸುರತ್ಕಲ್ ಟೋಲ್ ಗೇಟ್ ಅಕ್ರಮವಾಗಿದ್ದು, ಅದನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ನೇತೃತ್ವದಲ್ಲಿ ಸಮಾನಮನಸ್ಕ ಸಂಘಟನೆಗಳು ನಡೆಸಲುದ್ದೇಶಿಸಿರುವ ಅನಿರ್ದಿಷ್ಟಾವಧಿ ಹಗಲು-ರಾತ್ರಿ ಧರಣಿ ಇಂದು ಆರಂಭಗೊಂಡಿದೆ.

ಟೋಲ್ ಗೇಟ್ ಪರಿಸರದಲ್ಲಿ ಧರಣಿ ಕುಳಿತಿರುವ ಹೋರಾಟಗಾರರು, ಭರವಸೆಗಳು ಬೇಡ, ಟೋಲ್ ನಿಲ್ಲಿಸಿ ಎಂದು ಒತ್ತಾಯಿಸುತ್ತಿದ್ದರಲ್ಲದೆ, ಅಕ್ರಮ ಟೋಲ್ ಗೇಟ್ ತೆರವು ಆಗುವವರೆಗೆ ಅನಿರ್ದಿಷ್ಟಾವಧಿ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

SURATHKAL TOLL

ಧರಣಿನಿರತರು ರಾಜ್ಯ ಬಿಜೆಪಿ ಸರಕಾರ, ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲು ಸೇರಿದಂತೆ ಕರಾವಳಿಯ ಶಾಸಕರ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ.

ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ, ಮಾಜಿ ಸಚಿವರಾದ ರಮನಾಥ ರೈ, ಕೆ.ಅಭಯಚಂದ್ರ ಜೈನ್, ಹೋರಾಟಗಾರರಾದ ವಕೀಲ ದಿನೇಶ ಹೆಗ್ಡೆ ಉಳೆಪಾಡಿ, ಪ್ರತಿಭಾ ಕುಳಾಯಿ, ಬಿ.ಕೆ.ಇಮ್ತಿಯಾಝ್, ಮಾಜಿ ಶಾಸಕ ಮೊಯ್ದಿನ್ ಬಾವ, ರಾಘವೇಂದ್ರ ರಾವ್, ಮುಹಮ್ಮದ್ ಕುಂಜತ್ತಬೈಲ್ ಮೊದಲಾದ ಪ್ರಮುಖರು ಹೋರಾಟಕ್ಕೆ ನೇತೃತ್ವ ನೀಡಿದ್ದಾರೆ.

ಪ್ರತಿಭಟನೆಯ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ. ಎರಡು ಕೆ.ಎಸ್.ಆರ್.ಪಿ. ತುಕಡಿ ಸೇರಿದಂತೆ 100ರಷ್ಟು ಪೆÇಲೀಸರನ್ನು ನಿಯೋಜಿಸಿದ್ದಾರೆ.

Related Posts

Leave a Reply

Your email address will not be published.