ಒಂದು ತಿಂಗಳೊಳಗೆ ಸುರತ್ಕಲ್ ಟೋಲ್ ವಿಲೀನಕ್ಕೆ ನಿರ್ಧಾರ
ಸುರತ್ಕಲ್ ಟೋಲ್‍ನ್ನು ಹೆಜಮಾಡಿ ಹಾಗೂ ತಲಪಾಡಿ ಜತೆ ಒಂದು ತಿಂಗಳೊಳಗೆ ವಿಲೀನಕ್ಕೆ ನಿರ್ಧರಿಸಲಾಗಿದೆ.ನಗರದ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯಿತು.
ಎನ್‍ಎಚ್‍ಐ ಅಧಿಕಾರಿ ಲಿಂಗೇಗೌಡ ಸಭೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದರು. ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಚರ್ಚೆ ಮಾಡಲಾಗಿದೆ. ಟೋಲ್ ವಿಲೀನದ ಬಗ್ಗೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ.ಒಂದು ತಿಂಗಳ ಅವಧಿಯೊಳಗೆ ಸುರತ್ಕಲ್ ಟೋಲ್ ಅನ್ನು ಬೇರೆ ಟೋಲ್ ನೊಂದಿಗೆ ವಿಲೀನಕ್ಕೆ ಸೂಚಿಸಲಾಗಿದೆ ಎಂದು ಅಧಿಕಾರಿ ಲಿಂಗೇಗೌಡ ಹೇಳಿದರು. ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಹಾಯಕ ಆಯುಕ್ತ ಮದನ್ ಮೋಹನ್ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ದಿಶಾ ಸಭೆಯ ನಾಮನಿರ್ದೇಶಿತ ಸದಸ್ಯರು ಭಾಗವಹಿಸಿದ್ದಾರೆ.