ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ 12 ಮಂದಿ ವಶಕ್ಕೆ

ಮಂಗಳೂರು ನಗರ ಪೆÇಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿ ಗುರುವಾರ ರಾತ್ರಿ ವೇಳೆ ಅನಗತ್ಯವಾಗಿ ಸಂಚರಿಸುತ್ತಿದ್ದ 12 ಮಂದಿಯನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ. ಸುರತ್ಕಲ್ ನಲ್ಲಿ ಕಳೆದ ರಾತ್ರಿ ನಡೆದ ಮುಹಮ್ಮದ್ ಫಾಝಿಲ್ ಕೊಲೆಯ ಹಿನ್ನೆಲೆಯಲ್ಲಿ ಮಂಗಳೂರು ಪೆÇಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ವಿಧಿಸಲಾಗಿದೆ. ರಾತ್ರಿ ವೇಳೆ ಅನಗತ್ಯ ಜನ ಸಂಚಾರವನ್ನು ನಿಷೇಧಿಸಲಾಗಿದೆ. ಈ ಸಂಬಂಧ 12 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೋಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.
