ಜಲೀಲ್ ಹತ್ಯೆ ಪ್ರಕರಣ: ಆರೋಪಿಗಳ ಪತ್ತೆಗಾಗಿ 8ಅಧಿಕಾರಿಗಳ ತಂಡ ರಚನೆ

ಕಾಟಿಪಳ್ಳ ನಿವಾಸಿ ಜಲೀಲ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳ ಪತ್ತೆಗೆ 8 ಅಧಿಕಾರಿಗಳಿರುವ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತರಾದ ಶಶಿಕುಮಾರ್ ಹೇಳಿದ್ದಾರೆ.

ಜಲೀಲ್ ಹತ್ಯೆಗೆ ಸಂಬಂಧಿಸಿ ಎಲ್ಲ ಆಯಾಮಗಳಿಂದಲೂ ತನಿಖೆ ನಡೆಸಲಾಗುತ್ತಿದೆ. ಹತ್ಯೆ ಮಾಡಿರುವ ನೈಜ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುತ್ತದೆ. ಸಾರ್ವಜನಿಕರು ಯಾವುದೇ ಊಹಾಪೋಹಗಳಿಗೆ ಕಿವಿಕೊಡಬಾರದು ಎಂದು ಹೇಳಿದರು.

ಜಲೀಲ್ ಕೊಲೆ ಆರೋಪಿಗಳ ಶೀಘ್ರ ಬಂಧನಕ್ಕೆ ಆಕ್ರೋಶಿತ ಗುಂಪು ಜಲೀಲ್ ಮನೆ ಬಳಿ ಮೃತದೇಹವನ್ನು ಇಟ್ಟು ಪ್ರತಿಭಟನೆ ನಡೆಸಿದ್ದಾರೆ. ಆರೋಪಿಗಳ ಬಂಧನಕ್ಕೆ 24 ಗಂಟೆಯೊಳಗೆ ಬಂಧಿಸಬೇಕೆಂದು ಗಡುವು ನೀಡಿದ್ದಾರೆ. ಸಾರ್ವಜನಿಕರ ಮನವೊಲಿಸಿ ಜಲೀಲ್ ಮೃತದೇಹವನ್ನು ದಫನಕ್ಕಾಗಿ ಮಸೀದಿಗೆ ಕಳುಹಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಈಗಾಗಲೇ 4ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿಯಲ್ಲಿದೆ. ಕ್ರಿಸ್ಮಸ್ ಇರುವುದರಿಂದ ಪೂರ್ವ ನಿಯೋಜಿತ ಕಾರ್ಯಕ್ರಮಗಳಿಗೆ ವಿನಾಯಿತಿ ನೀಡಲಾಗಿದೆ ಎಂದು ಶಶಿಕುಮಾರ್ ಹೇಳಿದ್ದಾರೆ.

Related Posts

Leave a Reply

Your email address will not be published.