ಸ್ವಚ್ಛತಾ ಹೀ ಸೇವಾ ಆಂದೋಲನ :ತೆಂಕಮಿಜಾರಿನಲ್ಲಿ ಸ್ವಚ್ಛತಾ ಶ್ರಮದಾನ
ಮೂಡುಬಿದಿರೆ: “ಸ್ವಚ್ಛತಾ ಹೀ ಸೇವಾ” ಆಂದೋಲನ ಮತ್ತು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ‘ಸ್ವಚ್ಚತೆಯೆಡೆಗೆ ದಿಟ್ಟ ಹೆಜ್ಜೆ’ ಅಭಿಯಾನದಡಿ ತೆಂಕಮಿಜಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತಾ ಶ್ರಮದಾನ ಶನಿವಾರ ನಡೆಯಿತು.
ಆಳ್ವಾಸ್ ಕಾಲೇಜಿನ ಎನ್‌ಎಸ್ ಎಸ್ ವಿದ್ಯಾರ್ಥಿಗಳೊಂದಿಗೆ ನಿರ್ಕೇರೆ ಅಶ್ವಥಪುರ ಹಾಗೂ ಮಿಜಾರಿನ ರಸ್ತೆ ಬದಿಯಲ್ಲಿ ಬಿದ್ದಿರುವ ಪ್ಲಾಸ್ಟಿಕ್ ಮತ್ತು ಇತರ ಕಸಗಳನ್ನು ಹೆಕ್ಕಿ ಸ್ವಚ್ಛಗೊಳಿಸಲಾಯಿತು.
ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷೆ ಶಾಲಿನಿ, ಸದಸ್ಯರಾದ ದಿನೇಶ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರೋಹಿಣಿ, ಪಂಚಾಯತ್ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟ ದ ಸದಸ್ಯರು ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.