ನೀರುಮಾರ್ಗದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ : ಜನ ಭಯಭೀತರಾಗುವುದು ಬೇಡಾ : ದ.ಕ.ಜಿಲ್ಲಾಧಿಕಾರಿ ರವಿಕುಮಾರ್ ಎಂ ಆರ್

ಮಂಗಳೂರು : ಮಂಗಳೂರು ನಗರದ ನೀರುಮಾರ್ಗದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿದ್ದು, ಇಲ್ಲಿಂದ ಒಂದು ಕಿ.ಮೀ ವ್ಯಾಪ್ತಿಯನ್ನು ರೋಗಪೀಡಿತ ವಲಯ ಮತ್ತು ಹತ್ತು ಕಿ.ಮೀ ವ್ಯಾಪ್ತಿಯನ್ನು ಜಾಗೃತ ವಲಯ ಎಂದು ಜಿಲ್ಲಾಡಳಿತ ಘೋಷಿಸಿದೆ.
ನಗರದ ನೀರುಮಾರ್ಗ ಗ್ರಾಮದ ಕೆಲರಾಯಿ ಪ್ರದೇಶದಲ್ಲಿರುವ ಹಂದಿ ಸಾಕಾಣಿಕಾ ಕೇಂದ್ರದಲ್ಲಿನ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ ಇರುವುದು ದೃಢಪಟ್ಟಿದೆ.
ಈ ರೋಗ ಹರಡುವುದನ್ನು ತಡೆಗಟ್ಟಲು ರಾಷ್ಟ್ರೀಯ ರೋಗ ನಿಯಂತ್ರಣ ಮಾರ್ಗಸೂಚಿಯಂತೆ ಅಗತ್ಯ ಕ್ರಮಕೈಗೊಳ್ಳಲಾಗುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ ಆರ್ ತಿಳಿಸಿದ್ದು ಜನ ಭಯಭೀತರಾಗುವುದು ಬೇಡಾ ಎಂದು ತಿಳಿಸಿದ್ದಾರೆ.